ಸಾವಿರ ಮುಖಬೆಲೆಯ ನೋಟ್​ ಚಲಾವಣೆಗೆ ಚಿಂತನೆ

2 ಸಾವಿರ ಮುಖಬೆಲೆಯ ನೋಟುಗಳಿಗೆ ಚಿಲ್ಲರೆ ಸಮಸ್ಯೆ ಎದುರಾಗಿದೆ. ಶೀಘ್ರವೇ ಸಾವಿರ ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತರಲು ಭಾರತೀಯ ರಿಸರ್ವ್‌ ಬ್ಯಾಂಕ್‌ ಸಿದ್ಧತೆ ನಡೆಸಿದೆ. ಹೊಸ ವಿನ್ಯಾಸದ ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ಮುದ್ರಣದ ಕೆಲಸವನ್ನು ಆರ್‌ಬಿಐ ತ್ವರಿತಗೊಳಿಸಿದೆ. ಹಳೆ ಸಾವಿರ ರೂಪಾಯಿ ನೋಟಿಗಿಂತ ಹೊಸ ನೋಟು ಗಾತ್ರದಲ್ಲಿ ಚಿಕ್ಕದಾಗಿರಲಿದ್ದು, ಸುರಕ್ಷತೆಗೆ ಸಂಬಂಧಿಸಿ ಹೆಚ್ಚು ಅಂಶಗಳನ್ನು ಹೊಂದಿರಲಿದೆಯಂತೆ. ಬಣ್ಣದಲ್ಲಿಯೂ ವ್ಯತ್ಯಾಸ ಇರಲಿದೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಅಂಧರಿಗೆ ಗುರುತಿಸಲು ಸಾಧ್ಯವಾಗುವಂತೆ ಹೊಸ ನೋಟುಗಳು ಬ್ರೈಲ್‌ಸ್ನೇಹಿ ಆಗಿರಲಿವೆ.. ಇನ್ನು 2 ಸಾವಿರ ಮುಖಬೆಲೆಯ ನೋಟುಗಳನ್ನು ಕ್ರಮೇಣ ಚಲಾವಣೆಯಿಂದ ಹಿಂದಕ್ಕೆ ಪಡೆಯುವ ಚಿಂತನೆ ಇದೆ ಅಂತ ಮೂಲಗಳು ತಿಳಿಸಿವೆ.

0

Leave a Reply

Your email address will not be published. Required fields are marked *