72ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

72ನೇ ಸ್ವಾತಂತ್ರ್ಯೋತ್ಸವಗ ಸಂಭ್ರಮ, ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಕುಮಾರಸ್ವಾಮಿ, ಸೇನಾಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದ ಸಿಎಂ. ರಾಜ್ಯದ ಜನತೆಯನ್ನು ಉದ್ದೇಶಿಸಿ ಸಿಎಂ ಭಾಷಣ, ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವ ಶುಭಾಶಯ ಕೋರಿದ ಸಿಎಂ, ವೈವಿಧ್ಯತೆಯಲ್ಲಿ ಏಕತೆ ಸಾಧಿಸಿದ ಭಾರತ ಅಗ್ರಮಾನ್ಯ ಸ್ಥಾನದಲ್ಲಿ ನಿಲ್ಲಲಿದೆ. ಅಹಿಂಸಾ ಹೋರಾಟದಿಂದ ನಾವು ಸ್ವಾತಂತ್ರ್ಯ ಪಡೆದಿದ್ದೇವೆ, ‘ನನ್ನ ಜೀವನವೇ ನನ್ನ ಸಂದೇಶ’ ಎಂಬ ಮಹಾತ್ಮರ ಮಾತೆ ನನಗೆ ಆದರ್ಶ. ಗಂಗಾ ,ಕದಂಬ,ಚಾಲುಕ್ಯರ ಆಡಳಿತ ಇಡೀ ಕನ್ನಡ ಮಣ್ಣಿನ ಮಂತ್ರಕ್ಕೆ ಸಾಕ್ಷಿ, ಕರ್ನಾಟಕದಿಂದ ಸ್ವಾತಂತ್ರ್ಯ ಹೋರಾಟಕ್ಕೆ ಸಿಕ್ಕ ಬೆಂಬಲ ನೆನೆದ ಸಿಎಂ, ಜ್ಞಾನಪೀಠ ಪ್ರಶಸ್ತಿ ಕನ್ನಡದ ಕಿರೀಟ ಎಂದ ಸಿಎಂ ಕುಮಾರಸ್ವಾಮಿ,ಇತ್ತಿಚಿಗೆ ಕರ್ನಾಟಕವನ್ನು ಒಡೆಯುವ ಅಪಸ್ವರ ಕೇಳಿ ಬಂದಿದೆ. ಆದ್ರೆ ನಾವು ಅದಕ್ಕೆ ಅವಕಾಶ ಕೊಡುವುದಿಲ್ಲ, ಹರಿದು ಹಂಚಿ ಹೋಗಿದ್ದ ರಾಜ್ಯವನ್ನು ಒಗ್ಗೂಡಿಸುವಲ್ಲಿ ಹಿರಿಯರ ತ್ಯಾಗವಿದೆ. ಏಕೀಕರಣ ಚಳುವಳಿ ರಾಜ್ಯಕ್ಕೆ ಒಂದು ರೂಪ ಕೊಟ್ಟಿದೆ, ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಮೈತ್ರಿ ಸರ್ಕಾರದ ಬಜೆಟ್ ಅನುಷ್ಠಾಕ್ಕೆ ಸರ್ಕಾರ ಅಸ್ತು, ರೈತರ ಏಳಿಗೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಸಾಲಮನ್ನಾ ಮೂಲಕ ರೈತರ ಉತ್ಸಾಹ ಹೆಚ್ಚಿಸುವ ಕೆಲಸ ಮಾಡಿದೆ, ಮಂಡ್ಯದಲ್ಲಿ ಭತ್ತದ ನಾಟಿ ಮಾಡಿದ ಸಮಯ ನೆನೆದ ಸಿಎಂ ತಿಂಗಳಿಗೊಮ್ಮ ರೈತರ ಜೊತೆ ಕಾಲ ಕಳೆಯುಲು ನಿರ್ಧರಿಸಿದ್ದೇನೆ. ರೈತರ ಆತ್ಮಹತ್ಯೆ ಸುದ್ದಿಕೇಳಿದಾಗ ಕುಟುಂಬಸ್ಥರನ್ನು ಕಳೆದುಕೊಂಡ ಅನುಭವಾಗಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ಸಿಎಂ ಮನವಿ, ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದರು 13 ಜಿಲ್ಲೆಗಳಲ್ಲಿ ಬರಗಾಲವಿದೆ.

ಮಾನವ ಸಂಪನ್ಮೂಲದಲ್ಲಿ ರಾಜ್ಯ ಉನ್ನತ ಸ್ಥಾನದಲ್ಲಿದೆ, ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲೂ ಉದ್ಯಮ ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಉದ್ಯಮಗಳಿಗೆ ಸಂಬಂಧಿಸಿದಂತೆ ಕೌಶಲ್ಯ ಅಭಿವೃದ್ಧಿ ನಿಗಮ ಸ್ಥಾಪನೆ, ಚೀನಾ ದೇಶದೊಂದಿಗೆ ಸಕಾರಾತ್ಮಕ ಸ್ಪರ್ಧೆ ಮಾಡಬೇಕು, ಸ್ಥಳೀಯರಿಗೆ ಉದ್ಯೋಗ ಸ್ಥಾಪಿಸಲು ಬದ್ಧರಾಗಿದ್ದೇವೆ. ಬೆಂಗಳೂರು ಟೆಕ್ ಮೀಟ್ ನಡೆಯಲಿದೆ, ಬೆಂಗಳೂರಿನಲ್ಲಿ ಬಂಡವಾಳ ಹೂಡಲು ಉದ್ಯಮಿಗಳು ಉತ್ಸಹಕರಾಗಿದ್ದಾರೆ. ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳಲಾಗುತ್ತಿದೆ, ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಸಾಧ್ಯತೆ ಇದೆ. ಸೋಲಾರ್ ವಿದ್ಯುತ್ ಉತ್ಪಾದನೆಯಲ್ಲೂ ಸಾಥನೆ ಉತ್ತಮವಾಗಿದೆ, ಎಲ್ಲಾ ವರ್ಗದ ಗ್ರಾಹಕರಿಗೆ ದಿನಪೂರ್ತಿ ವಿದ್ಯುತ್ ಒದಗಿಸಲು ಶ್ರಮಿಸಲಾಗುವುದು. ರೈತರ ನೀರಾವರಿ ಪಂಪ್ ಸೆಟ್‌ಗಳಿಗೆ ಹಗಲು 7 ಗಂಟೆ ವಿದ್ಯುತ್ ಒದಗಿಸಲು ಕ್ರಮ, ರಾಜ್ಯದ ಶಿಕ್ಷಣ ಸಂಸ್ಥೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿವೆ. ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ, ಸರ್ಕಾರಿ ಶಾಲೆ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಂಡಿದೆ.  ಪೋಷಕರಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ಅರಿವು ಮೂಡಿಸಲಾಗುವುದು, ರಾಜ್ಯದಲ್ಲಿ ಮೊದಲ ಬಾರಿಗೆ ಕೌಶಲ್ಯ ಆಧಾರಿತ ವಿವಿ ತೆರೆಯಲು ನಿರ್ಧರಿಸಲಾಗಿದೆ. ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪ್ರಾಚ್ಯ ವಸ್ತುಗಳ ಬಗ್ಗೆ ಅರಿವು ಮೂಡಿಸಲಾಗುವುದು, ಇತ್ತಿಚೆಗೆ ಮೂಲ ವಿಜ್ಞಾನವನ್ನು ಕಡೆಗಣಿಸಲಾಗುತ್ತಿದೆ.

ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಸಾಧಿಸುವವರಿಗೆ ಹೆಚ್ಚಿನ ಪ್ರೋತ್ಸಾಹ, ಗೌರಿಬಿದನೂರಿನಲ್ಲಿ ಈ ಬಗ್ಗೆ ಒಂದು ಸಂಸ್ಥೆ ತೆರೆಯಲು ನಿರ್ಧರಿಸಲಾಗಿದೆ. ಕಿದ್ವಾಯಿ ಕ್ಯಾನ್ಸರ್ ಸಂಸ್ಥೆ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಮಹಿಳೆಯರ ಪೋಷ್ಠಿಕತೆ, ದೌರ್ಜನ್ಯ ತಡೆಗೆ ಆದ್ಯತೆ ನೀಡಲಾಗುತ್ತಿದೆ. ಮಹಿಳೆಗೆ ಭದ್ರತಾ ಭಾವನೆ ಮೂಡಿಸಲು ಸರ್ಕಾರ ಆದ್ಯತೆ ನೀಡುತ್ತದೆ, ರಾಜ್ಯದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾಲಯ ನಿರ್ಮಾಣಕ್ಕೆ ಆದ್ಯತೆ, ಹಳ್ಳಿಗಳಲ್ಲಿ ಕುಡಿಯುವ ನೀರು ಸೌಲಭ್ಯಕ್ಕೆ ಆದ್ಯತೆ. ಸರ್ಕಾರಿ ಸಾರಿಗೆ ಉತ್ತಮಗೊಳಿಸಲು ಕ್ರಮ, ಬೆಂಗಳೂರು ಟ್ರಾಫಿಕ್ ಸಮಸ್ಯೆ ಬಗ್ಗೆಯು ಕ್ರಮ, ರಾಜ್ಯದಲ್ಲಿ ಪ್ರಗತಿಯಲ್ಲಿರುವ ಹೆದ್ದಾರಿ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು. ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಮಳೆಯಿಂದ ಸಣ್ಣ ಸೇತುವೆಗಳು ಹಾನಿಗೊಳಗಾಗಿವೆ, ಹಾಗಾಗಿ ರಾಜ್ಯದಲ್ಲಿ 480 ಸಣ್ಣ ಸೇತುವೆಗಳನ್ನು ನಿರ್ಮಿಸಲಾಗುವುದು. ಬೆಂಗಳೂರು ವಿಶ್ವಮಟ್ಟದಲ್ಲಿ ಹೆಸರು ಮಾಡುತ್ತಿದೆ, ಬೆಂಗಳೂರು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ನಡೆಯುತ್ತಿದ್ದ ಏರ್ ಶೋ ಸ್ಥಳಾಂತವಾಗಿದೆ ಎಂಬ ಮಾತು ಕೇಳಿ ಬಂದಿದೆ, ಸ್ಥಳಾಂತರ ಮಾಡದಂತೆ ಪ್ರಧಾನಿಗೆ ಮನವಿ ಮಾಡಲಾಗುವುದು.

0

Leave a Reply

Your email address will not be published. Required fields are marked *