ಜೆಡಿಎಸ್ ಗೆದ್ದರೆ ಮಾತ್ರ ಮಾಗಡಿ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧ್ಯ: ಎ.ಮಂಜು

ರಾಮನಗರ: ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ರಂಗೇರಿದೆ. ಮಾಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಹೆಚ್.ಸಿ.ಬಾಲಕೃಷ್ಣ ಟಾಂಗ್ ಕೊಡುವ ಹಿನ್ನಲೆ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಜೆಡಿಎಸ್ ಅಭ್ಯರ್ಥಿ ಎ.ಮಂಜು ಪರ ಪ್ರಚಾರ ಆರಂಭಿಸಿದ್ದಾರೆ. ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ನೂತನ ಜೆಡಿಎಸ್ ಭವನಕ್ಕೆ ದೇವೇಗೌಡ್ರು ಚಾಲನೆ ಕೊಟ್ಟರು. ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮಕ್ಕೆ ಇದೇ ವೇಳೆ ಚಾಲನೆ ಕೊಟ್ಟರು. ಇದಕ್ಕೂ ಮುನ್ನ ಕ್ಷೇತ್ರಕ್ಕೆ ಆಗಮಿಸಿದ ದೇವೇಗೌಡರನ್ನು ಬೈಕ್ ರ್ಯಾಲಿ ಮೂಲಕ ಸಾವಿರಾರು ಕಾರ್ಯಕರ್ತರು ವೇದಿಕೆಗೆ ಕರೆ ತರಲಾಯಿತು. ಈ ವೇಳೆ ಜೆಡಿಎಸ್ ಅಭ್ಯರ್ಥಿ ಎ.ಮಂಜು ಮಾತನಾಡಿ, ರಾಜ್ಯಕ್ಕೆ ಕುಮಾರಣ್ಣ ಮುಖ್ಯಮಂತ್ರಿ, ಮಾಗಡಿಗೆ ಎ.ಮಂಜು ಆಯ್ಕೆ ಮಾಡಿರಿ ಎನ್ನುವ ಮೂಲಕ ಶಾಸಕ ಬಾಲಕೃಷ್ಣನಿಗೆ ನೇರವಾಗಿಯೇ ಟಾಂಗ್ ನೀಡಿದರು. ಜೆಡಿಎಸ್ ಅಭ್ಯರ್ಥಿ ಗೆದ್ದರೆ ಮಾತ್ರ ಮಾಗಡಿ  ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧ್ಯ ಎಂದರು.

0

Leave a Reply

Your email address will not be published. Required fields are marked *