ಮಹಾಕಾಲ ಸನ್ನಿಧಿಯಲ್ಲಿ ಹೂವಿನ ವ್ಯಾಪಾರಿಗಳ ನಡುವೆ ಮಾರಾಮಾರಿ

ಭೋಪಾಲ್: ಮಧ್ಯಪ್ರದೇಶದ ಉಜ್ಜೈನಿ ಬಳಿಯ ಮಹಾಕಾಲ ದೇವಾಲಯದ ಬಳಿ ಹೂವಿನ ವ್ಯಾಪಾರಿಗಳು ಪರಸ್ಪರರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ನಾಗರಿಕರು ಮೊಬೈಲ್​​ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೋದಲ್ಲಿ ವ್ಯಕ್ತಿಯೊಬ್ಬ ಅಮಾನುಷವಾಗಿ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದು, ಕೋಲು ಮುರಿದು ಹೋಗುವವರೆಗೆ ಥಳಿಸಿದ್ದಾನೆ. ಈ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

0

Leave a Reply

Your email address will not be published. Required fields are marked *