ರೈತರ ಸಂಪೂರ್ಣ ಸಾಲ ಮನ್ನಾಗೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಬೃಹತ್ ಪ್ರತಿಭಟನೆ

ಮುಂಬೈ: ಮಹಾರಾಷ್ಟ್ರದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾಗೆ ಆಗ್ರಹಿಸಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ಕಾವು ಪಡೆದುಕೊಳ್ಳುತ್ತಿದೆ. ರೈತರ ಸಾಲ ಮನ್ನಾ ಮಾಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಆಗ್ರಹಿಸಿರುವ ಅಖಿಲ ಭಾರತ ಕಿಸಾನ್ ಸಭಾದಿಂದ ಪ್ರತಿಭಟನೆಯ ಕಾರ್ಯಕರ್ತರು ನಾಸಿಕ್​​ನಿಂದ ಮುಂಬೈಗೆ ಜಾಥಾ ನಡೆಸುತ್ತಿದ್ದಾರೆ. ಈ ಬೃಹತ್ ಜಾಥಾದಲ್ಲಿ 30,000ಕ್ಕೂ ಹೆಚ್ಚು ಪ್ರತಿಭಟನಾಕಾರರು ಭಾಗಿಯಾಗಿದ್ದು, ಮಾರ್ಚ್ 12ರವರೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದ್ದಾರೆ.

0

Leave a Reply

Your email address will not be published. Required fields are marked *