‘ಮೈತ್ರಿ ಸರ್ಕಾರದ ಬಜೆಟ್ ಸುಳ್ಳಿನ ಬಜೆಟ್’

ಸಿಎಂ ಕುಮಾರಸ್ವಾಮಿ ಮಂಡಿಸಿರುವ ಬಜೆಟ್ ಸುಳ್ಳಿನ‌ ಬಜೆಟ್. ಈ ರೀತಿಯ ಬಜೆಟ್ ಮಂಡಿಸುವ ಮೂಲಕ ಸಿಎಂ ಜನರ ಹಾಗೂ ರೈತರ ಮೂಗಿಗೆ ತುಪ್ಪ ಹಚ್ಚುವ ಕೆಲಸಮಾಡಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಬಜೆಟ್ ನಲ್ಲಿ ಕುಮಾರಸ್ವಾಮಿ ಸಾಲಮನ್ನಾ ಘೋಷಣೆ ಮಾಡಿದ್ದು, ಎಷ್ಟು ಸಾಲಮನ್ನಾ ಆಗುತ್ತೆ ಎಂಬ ಸ್ಪಷ್ಟತೆ ಇಲ್ಲ. ಹಾಗಾಗಿ ಸಿ ಎಂಸುಳ್ಳು ಹೇಳಿದ್ದಾರೆ ಎಂದ್ರು. ಇನ್ನು ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ಟಿಕೇಟ್ ಕೈ ತಪ್ಪುವ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ನನಗೆ ಪಕ್ಷ ಯಾವ ಜವಾಬ್ದಾರಿ ಕೊಟ್ಟರು ನಿರ್ವಹಿಸುತ್ತೇನೆ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡ ಎಂದರು ನಾನು ರೆಡಿ. ಚುನಾವಣೆಗೆ ಸ್ಪರ್ಧೆ ಮಾಡಿ ಎಂದರೆ ಅದಕ್ಕೂ ರೆಡಿ. ರಾಷ್ಟ್ರದ ನಾಯಕತ್ವ, ರಾಜ್ಯದ ನಾಯಕತ್ವ ಯಾವುದು ಕೊಟ್ಟರು ನಿಭಾಯಿಸುತ್ತೇನೆ ಎಂದು ಪ್ರತಿಕ್ರಿಯಿಸಿದ್ರು.

0

Leave a Reply

Your email address will not be published. Required fields are marked *