ಮೈತ್ರಿ ಸರ್ಕಾರಲ್ಲಿ ಸಣ್ಣ ಪುಟ್ಟ ದೋಷಗಳಿವೆ, ಆದರೆ ಸರ್ಕಾರ ಬೀಳುವುದಿಲ್ಲ: ಮಾಜಿ ಪ್ರಧಾನಿ ದೇವೇಗೌಡ

ಮೈತ್ರಿ ಸರ್ಕಾರ ಸುಭದ್ರವಾಗಿದೆ, ಮೈತ್ರಿ ಸರ್ಕಾರಲ್ಲಿ ಸಣ್ಣ ಪುಟ್ಟ ದೋಷಗಳಿವೆ, ಆದರೆ ಸರ್ಕಾರ ಬೀಳುವುದಿಲ್ಲ. ಕಳೆದ ಮೂರು ತಿಂಗಳಿಂದ ರಾಜ್ಯದ ಒಂದು ಸಮುದಾಯ ಸರ್ಕಾರ ಪತನಕ್ಕೆ ಕಾಯ್ತಿದೆ, ಸರ್ಕಾರ ಬೀಳಿಸಲು ಮುಹೂರ್ತ ಫಿಕ್ಸ್ ಮಾಡಿದವರಿಗೆ ಮತ್ತೆ ನಿರಾಸೆಯಾಗಲಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿಕೆ. ದೇಶದ ಇತಿಹಾಸದಲ್ಲೇ ವಿಶಿಷ್ಟ ಕಾರ್ಯವನ್ನು ಹೆಚ್.ಡಿ.ಕುಮಾರಸ್ವಾಮಿ ಮಾಡಿದ್ದಾರೆ, ಕೇವಲ 37 ಶಾಸಕರನ್ನು ಇಟ್ಟುಕೊಂಡು ರೈತರ ಸಾಲ ಮನ್ನಾ ಮಾಡುವ ಸ್ಥೈರ್ಯ ಮೆಚ್ಚಬೇಕು. ತನ್ನ ಪಕ್ಷಕ್ಕೆ ಶಕ್ತಿ ಇಲ್ಲದಿದ್ದರೂ ರೈತರಿಗೆ ಶಕ್ತಿ ತುಂಬುವ ಕಾರ್ಯ ಮಾಡಿದ್ದಾರೆ, ಕುಮಾರಸ್ವಾಮಿ ಪರ ಬ್ಯಾಟಿಂಗ್ ಮಾಡಿದ ಹೆಚ್.ಡಿ.ದೇವೇಗೌಡ.

0

Leave a Reply

Your email address will not be published. Required fields are marked *