ಅಧ್ಯಕ್ಷ ಸ್ಥಾನದಿಂದ ಅನುರಾಗ್​ ಠಾಕೂರ್​ ಕಿಕ್​​ ಔಟ್..!​

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸ್ಥಾನದಿಂದ ಅನುರಾಗ್ ಠಾಕೂರ್ ಅವರನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ ಸುದ್ದಿ ಸಾಮಾಜಿಕ ಜಾಲ ತಾಣಗಳಲ್ಲಿ ಭಾರಿ ಚರ್ಚೆಗೊಳಪಟ್ಟಿದೆ.
 
ನವದೆಹಲಿ, ಜನವರಿ 02: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸ್ಥಾನದಿಂದ ಅನುರಾಗ್ ಠಾಕೂರ್ ಅವರನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ ಸುದ್ದಿ ಸಾಮಾಜಿಕ ಜಾಲ ತಾಣಗಳಲ್ಲಿ ಭಾರಿ ಚರ್ಚೆಗೊಳಪಟ್ಟಿದೆ. ನ್ಯಾ. ಲೋಧಾ ಸಮಿತಿ ಶಿಫಾರಸುಗಳನ್ನು ಅನುಷ್ಠಾನಗಳನ್ನು ವಿಫಲವಾದ ಹಿನ್ನಲೆಯಲ್ಲಿ ಅನುರಾಗ್ ಠಾಕೂರ್ ಹಾಗೂ ಅಜಯ್ ಶಿರ್ಕೆ ಅವರನ್ನು ಅವರ ಸ್ಥಾನದಿಂದ ಕೆಳಗಿಳಿಸಲಾಗಿದ್ದು, ಇಬ್ಬರಿಗೂ ನೋಟಿಸ್ ಜಾರಿಗೊಳಿಸಲಾಗಿದೆ. ಹಾಲಿ ಉಪಾಧ್ಯಕ್ಷ ಸ್ಥಾನದಲ್ಲಿರುವ ಹಿರಿಯರೊಬ್ಬರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಕ್ರಿಕೆಟ್ ಆಡಳಿತ ಮಂಡಳಿಯಲ್ಲಿ ಪಾರದರ್ಶಕತೆ ತರಲು ಕೋರ್ಟ್ ಯತ್ನಿಸುತ್ತಿರುವುದರ ಬಗ್ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದರೂ, ಕ್ರಿಕೆಟ್ ಮಂಡಳಿಯನ್ನು ನಿವೃತ್ತ ಜಡ್ಜ್ ಗಳು, ವಕೀಲರು ಹೇಗೆ ನಿಭಾಯಿಸಬಲ್ಲರು ಎಂದು ಪ್ರಶ್ನಿಸಿದ್ದಾರೆ. ಒಟ್ಟಾರೆ ಠಾಕೂರ್ ಅವರನ್ನು ವಜಾಗೊಳಿಸಿದ ಸುದ್ದಿಯ ಬಗ್ಗೆ ಬಂದಿರುವ ಪರ -ವಿರೋಧ ಪ್ರತಿಕ್ರಿಯೆಗಳನ್ನು ಮುಂದೆ ಓದಿ…..

0

Leave a Reply

Your email address will not be published. Required fields are marked *