ಬೆಂಗಳೂರಿನಲ್ಲಿ ನಾಳೆಯಿಂದ ಪ್ರವಾಸಿ ದಿವಸ್​ ಸಮ್ಮೇಳನ

ಬೆಂಗಳೂರಿನಲ್ಲಿ ನಾಳೆಯಿಂದ ಅಂತರಾಷ್ಟ್ರೀಯ ಪ್ರವಾಸಿ ದಿವಸ್​ ಸಮ್ಮೇಳನ ನಡೆಯಲಿದೆ. ಮೂರು ದಿನಗಳ ಕಾಲ ನಡೆಯಲಿರುವ ಪ್ರವಾಸಿ ದಿವಸ್ ಸಮ್ಮೇಳನದಲ್ಲಿ ಸಾವಿರಾರು ವಿದೇಶಿ ಪ್ರತಿನಿಧಿಗಳು ಭಾಗವಹಿಸುವ ನೀರಿಕ್ಷೆ ಇದೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ನಾನಾ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿ ನಡೆಯಲಿರುವ ಪ್ರವಾಸಿ ದಿವಸ್ ಸಮ್ಮೇಳನಕ್ಕೆ ನೋಟ್ ಬ್ಯಾನ್ ಎಫೆಕ್ಟ್​ ತಟ್ಟುವ ಭೀತಿ ಇದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕರನ್ಸಿ ಎಕ್ಸ್​ಚೆಂಚ್​ ಮಾಡಿಕೊಳ್ಳಲು ವಿಶೇಷ ವಿನಿಮಯ ಕೇಂದ್ರಗಳನ್ನು ತೆರೆಯಲು ನಿರ್ಧಾರ ಮಾಡಿದೆ. ಈ ಕುರಿತಂತೆ ರಾಜ್ಯ ಪ್ರವಾಸೋಧ್ಯಮ ಸಚಿವ ಆರ್​.ವಿ. ದೇಶಪಾಂಡೆ ವಿಮಾನ ನಿಲ್ದಾಣದ ಅಧಿಕಾರಿಗಳ ಜತೆ ಚರ್ಚೆ ಕೂಡ ನಡೆಸಿದ್ದಾರೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಣ್ಯರಿಗೆ ವಿಶೇಷ ಹೆಲಿಕಾಪ್ಟರ್ ವ್ಯವಸ್ಥೆಗಳನ್ನು ಕೂಡ ಮಾಡಲಾಗಿದೆ.

0

Leave a Reply

Your email address will not be published. Required fields are marked *