ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

ಇಂದಿನಿಂದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ದೆಹಲಿಯಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆಯಾಗಲಿದೆ. ಮುಖ್ಯವಾಗಿ ಐದು ರಾಜ್ಯಗಳ ಚುನಾವಣೆಯ ತಯಾರಿಯ ಬಗ್ಗೆ ಸಮಾಲೋಚನೆ  ನಡೆಯಲಿದೆ. ಹಾಗೇ ನೋಟ್​ ನಿಷೇಧವನ್ನು ಸಮರ್ಥನೆ ಮಾಡಿಕೊಳ್ಳುವ ಬಗ್ಗೆಯೂ  ಚರ್ಚೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಲಿದ್ದಾರೆ. ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಸೇರಿದಂತೆ ರಾಜ್ಯದ ಪ್ರಮುಖ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ.  

——————————————————————————————————————————————————

ಇಂದಿನಿಂದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ
ನವದೆಹಲಿ ನಡೆಯಲಿರುವ ರಾಷ್ಟ್ರೀಯ ಕಾರ್ಯಕಾರಿಣಿ
ಐದು ರಾಜ್ಯಗಳ ತಯಾರಿ ಕಾರ್ಯಕಾರಿಣಿಯ ಮುಖ್ಯ ಅಜೆಂಡಾ
ನೋಟು ನಿಷೇಧ ಸಮರ್ಥನೆ ಬಗ್ಗೆಯೂ ಸಮಾಲೋಚನೆ
ಕಾರ್ಯಕಾರಿಣಿ ಉದ್ದೇಶಿಸಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಭಾಷಣ
ರಾಜ್ಯದಿಂದ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತಿತರರು ಭಾಗಿ

0

Leave a Reply

Your email address will not be published. Required fields are marked *