ವಿಶ್ವವಿದ್ಯಾಲಯಗಳು/ಪದವಿ ಕಾಲೇಜುಗಳಿಗೆ ನೇಮಕ ವಿಚಾರ: ಜಿ ಟಿ ದೇವೇಗೌಡ ಹೇಳಿದ್ದೇನು?

ವಿಶ್ವವಿದ್ಯಾಲಯಗಳ ನೇಮಕದಲ್ಲಿ ಕುಲಪತಿಗಳ ಪಾತ್ರಕ್ಕೆ ತಡೆ

ಕೆಇಎನಿಂದ ವಿಶ್ವವಿದ್ಯಾಲಯಗಳಿಗೆ ನೇಮಕ ಮಾಡಲು ಕ್ರಮ

ಅಕ್ರಮ ನಡೆದ ಕುರಿತು ತನಿಖೆಗೆ ಚಿಂತನೆ

ಪ್ರಾಂಶುಪಾಲ, ಪದವಿ ಕಾಲೇಜುಗಳ ಸಹ ಪ್ರಾಧ್ಯಾಪಕ ಹುದ್ದೆ ಭರ್ತಿ – ಜಿ.ಟಿ.ದೇವೇಗೌಡ

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ನೇಮಕ ವಿಷಯದಲ್ಲಿ ಮಹತ್ವದ ಬದಲಾವಣೆಯನ್ನು ತೆಗೆದುಕೊಳ್ಳಲಾಗಿದೆ. ಇದುವರೆಗೆ ರಾಜ್ಯದ ವಿಶ್ವವಿದ್ಯಾಲಯಗಳಿಗೆ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನೇರ ನೇಮಕಾತಿಯ ಮೂಲಕ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿತ್ತು. ಆದರೆ, ಇಂದು ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆಯ ನಂತರ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಸುವ ಮೂಲಕ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನೇಮಕ ಮಾಡಲಾಗುವುದು ಎಂದರು. ವಿಶ್ವ ವಿದ್ಯಾಲಯಗಳ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ರಮ, ಸ್ವಜನ ಪಕ್ಷಪಾತದ ಆರೋಪ ಬಹಳ ಕಾಲದಿಂದ ಕೇಳಿಬರುತ್ತಿದೆ. ಈ ವಿಷಯ ಪ್ರಸ್ತಾಪಿಸಿದ ಅವರು, ವಿಶ್ವವಿದ್ಯಾಲಯಗಳಲ್ಲಿ ಅಕ್ರಮ ನಿಲ್ಲಿಸಲು ಈ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದರು. ಇದರೊಂದಿಗೆ 300 ಪ್ರಾಂಶುಪಾಲರು ಮತ್ತು ಪದವಿ ಕಾಲೇಜುಗಳಿಗೆ 3,000 ಸಹ ಪ್ರಾಧ್ಯಾಪಕರನ್ನು ಮುಂದಿನ ಶೈಕ್ಷಣಿಕ ವರ್ಷದ ಒಳಗೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು. ಜೊತೆಗೆ ವಿವಿಗಳಲ್ಲಿ ನಡೆದಿರುವ ಅವ್ಯವಹಾರಗಳ ಆರೋಪದ ಕುರಿತು ತನಿಖೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

0

Leave a Reply

Your email address will not be published. Required fields are marked *