ಇಂದಿನಿಂದ ಸಾಮಾನ್ಯ ಪ್ರವೇಶ ಪರೀಕ್ಷೆ ಆರಂಭ

ಎಂಜಿನಿಯರಿಂಗ್‌ ಸೇರಿದಂತೆ ಇತರೆ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಇಂದಿನಿಂದ ಆರಂಭವಾಗಿದೆ. ಈ ಬಾರಿ 1,00,077 ವಿದ್ಯಾರ್ಥಿಗಳು ಮತ್ತು 98,568 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 1,98,639 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು 86 ಪರೀಕ್ಷಾ ಕೇಂದ್ರಗಳು ಸೇರಿದಂತೆ ರಾಜ್ಯಾದ್ಯಂತ ಒಟ್ಟು 430 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಪರೀಕ್ಷಾ ಕಾರ್ಯಕ್ಕಾಗಿ 430 ವೀಕ್ಷಕರು, 860 ಮಂದಿ ವಿಶೇಷ ಜಾಗೃತ ದಳದ ಸದಸ್ಯರು, 430 ಪ್ರಶ್ನೆ ಪತ್ರಿಕೆ ಪಾಲಕರು, 12,440 ಕೊಠಡಿ ಮೇಲ್ವಿಚಾರಕರು ಸೇರಿದಂತೆ ಒಟ್ಟು 31,360 ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

0

Leave a Reply

Your email address will not be published. Required fields are marked *