ಅರಮನೆ ನಗರಕ್ಕೆ ಲಗ್ಗೆ ಇಟ್ಟ ನರಭಕ್ಷಕ

ಮೈಸೂರು: ನಗರದ ಮಂಡಕಳ್ಳಿ ವಿಮಾನ ನಿಲ್ದಾಣದ ಆವರಣದಲ್ಲಿ ರಾತ್ರಿಯ ವೇಳೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಚಿರತೆಗಳ ಓಡಾಟ ವಿಮಾನ ನಿಲ್ದಾಣದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಗರದ ನಂಜನಗೂಡು ರಸ್ತೆಯಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಳೆದ ಒಂದು ವಾರಗಳಿಂದ ರಾತ್ರಿಯ ವೇಳೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಇಲ್ಲಿ ವಾಸವಿರುವ ವಿಮಾನ ನಿಲ್ದಾಣದ ಅಧಿಕಾರಿಗಳಲ್ಲಿ ಭಯ ಉಂಟು ಮಾಡಿದೆ. ಕಳೆದ ಒಂದು ವಾರದಿಂದ ಮೂರು ಚಿರತೆಗಳು ರಾತ್ರಿಯ ವೇಳೆಯಲ್ಲಿ ಆಹಾರ ಹುಡುಕುತ್ತ ವಿಮಾನ ನಿಲ್ದಾಣದ ಆವರಣದಲ್ಲಿ ಓಡಾಡುತ್ತಿರುವ ದೃಶ್ಯ ವಿಮಾನ ನಿಲ್ದಾಣದಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಮಾನ ನಿಲ್ದಾಣದಲ್ಲಿ ಚಿರತೆ ಸೇರಿದಂತೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಅರಣ್ಯ ಇಲಾಖೆಗೆ ದೂರು ನೀಡಿದ ಹಿನ್ನಲೆಯಲ್ಲಿ ಇಂದು ನೂರಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಗಳು ಬೆಳಗ್ಗೆಯಿಂದಲೇ ಪಟಾಕಿ ಹಾರಿಸಿ ಕೂಂಬಿಂಗ್ ಕಾರ್ಯಚರಣೆ ನಡೆಸಿದ್ದು ಈ ಸಂದರ್ಭದಲ್ಲಿ ಚಿರತೆ ಪತ್ತೆಯಾಗಿಲ್ಲ. ಆದರೆ ಮುಳ್ಳುಹಂದಿ ಹಾಗೂ ನವಿಲುಗಳು ಕಾಣಿಸಿಕೊಂಡಿದ್ದು, ಇಲ್ಲಿ ರಾತ್ರಿ ವೇಳೆಯಲ್ಲಿ ಚಿರತೆಗಳು ಸಂಚಾರ ಇರುವುದು ಸಿಸಿಟಿವಿಯಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಒಳಗಡೆ ಚಿರತೆ ಸೆರೆಗಾಗಿ ಅರಣ್ಯಾಧಿಕಾರಿಗಳು ಬೋನ್ ಇರಿಸಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರಸ್ತೆಯಲ್ಲಿ ಚಿರತೆ ಓಡಾಡುತ್ತಿರುವುದು ವಾಹನ ಸವಾರರ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಜೊತೆಗೆ ಕಳೆದ ರಾತ್ರಿ ಮೈಸೂರಿನ ಜೆ.ಪಿ ನಗರದ ಅಪಾರ್ಟ್​​ಮೆಂಟ್​ನ ಆವರಣಕ್ಕೆ ಚಿರತೆ ನುಗ್ಗಿ ನಾಯಿ ಹಿಡಿಯಲು ಪ್ರಯತ್ನಿಸಿರುವ ಘಟನೆಯೂ ಸಹ ನಡೆದಿದೆ.

0

Leave a Reply

Your email address will not be published. Required fields are marked *