ಸಿಎಂ ದಂಗೆ ಹೇಳಿಕೆ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುತ್ತೇವೆ

ಸಿಎಂ ದಂಗೆ ಹೇಳಿಕೆ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುತ್ತೇವೆ, ಸಿಎಂ ಕುಮಾರಸ್ವಾಮಿ ಜನರನ್ನು ಹುಚ್ಚೆಬ್ಬಿಸುತ್ತಿದ್ದಾರೆ. ಅವರ ಕುಮ್ಮಕ್ಕಿನಿಂದ ನಿನ್ನೆ ಬಿಎಸ್‌ವೈ ಮನೆಗೆ ನುಗ್ಗುವ ಪ್ರಯತ್ನ ಆಗಿದೆ, ಈಗ ಸಿಎಂ ತಮ್ಮ ಹೇಳಿಕೆಗೆ ಹೊಸ ಅರ್ಥ ಕೊಡುವ ಪ್ರಯತ್ನ ಮಾಡ್ತಿದ್ದಾರೆ, ಬೆಂಗಳೂರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ. ಇದು ಸಿಎಂ ಕುಮಾರಸ್ವಾಮಿ ಮನಸ್ಥಿತಿಯನ್ನು ತೋರಿಸುತ್ತದೆ, ಡಾಲರ್ಸ್ ಕಾಲೋನಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ.

ಮೈತ್ರಿ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ತನ್ನ ಸಮರವನ್ನು ತೀವ್ರಗೊಳಸಿದೆ. ಬಿಜೆಪಿ ನಿಯೋಗ ಇಂದು ಸಂಜೆ ರಾಜ್ಯಪಾಲರನ್ನು ಭೇಟಿ ಮಾಡಲಿದ್ದು, ನಿನ್ನೆ ಸಿಎಂ ಕುಮಾರಸ್ವಾಮಿ ನೀಡಿರುವ ದಂಗೆ ಹೇಳಿಕೆ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರ ಸಲ್ಲಿಸಲಿದೆ. ಜೊತೆಗೆ ರಾಜ್ಯ ಸರ್ಕಾರದ ವಿರುದ್ಧವೂ ಬಿಜೆಪಿ ನಿಯೋಗ ದೂರ ದಾಖಲಿಸಿದೆ ಎನ್ನಲಾಗುತ್ತಿದೆ.

ನಿನ್ನೆ ಸಿಎಂ ಕುಮಾರಸ್ವಾಮಿ ಬಿಜೆಪಿ ವಿರುದ್ಧ ಜನರನ್ನು ದಂಗೆ ಏಳಿಸ್ತಿನಿ ಅಂತ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್​ ಕಾರ್ಯಕರ್ತರು ಬಿಎಸ್​.ಯಡಿಯೂರಪ್ಪ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದರು. ಇದನ್ನ ಖಂಡಿಸಿ ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಬಿಜೆಪಿ ನಿಯೋಗ ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜುಗೆ ದೂರು ನೀಡಿದ್ದಾರೆ. ಕೂಡಲೇ ಸಿಎಂ ಹಾಗೂ ಕಾಂಗ್ರೆಸ್​​ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳವಂತೆ ಆಗ್ರಹಿಸಿದ್ರು. ಅಲ್ಲದೆ 124A ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಲು ಮನವಿ ಮಾಡಿದ್ದೇವೆ ಅಂತ ಶೋಭ ಕರಂದ್ಲಾಜೆ ಹೇಳಿದ್ರು. ಈ ವೇಳೆ ಬಿಜೆಪಿ ನಾಯಕರಾದ ಆಯನೂರು ಮಂಜುನಾಥ್, ಗೋವಿಂದ್ ಕಾರಜೋಳ, ತೇಜಸ್ವಿನಿ ಉಪಸ್ಥಿತರಿದ್ದರು.

ಇನ್ನು ಸಿಎಂ ಹೇಳಿಕೆ ಖಂಡಿಸಿ ಡಿಜಿಗೆ ದೂರು ನೀಡಿದ ಬಳಿಕ ಬಿಜೆಪಿ ನಾಯಕರು ಬೆಂಗಳೂರಿನ ಮೈಸೂರು ಸರ್ಕಲ್‌ ಬಳಿ ಪ್ರತಿಭಟನೆ ನಡೆಸಿದ್ರು. ಸಿಎಂ ಹೇಳಿಕೆ ಸಂವಿಧಾನ ಬಾಹಿರ. ಜನರಿಗೆ ಪ್ರಚೋದನೆ ನೀಡುವ ಹಾಗಿದೆ. ಕೂಡಲೇ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

0

Leave a Reply

Your email address will not be published. Required fields are marked *