ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಳೆದ ಎರಡು ದಿನಗಳಿಂದ ಪ್ರವಾಸ….

ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಳೆದ ಎರಡು ದಿನಗಳಿಂದ ಪ್ರವಾಸ ಕೈಗೊಂಡಿದ್ದಾರೆ. ಇದೇ ಪ್ರಥಮ ಬಾರಿಗೆ ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೂ ಸಿದ್ದರಾಮಯ್ಯ ಭೇಟಿ ನೀಡಿದ್ದು ಸುಮಾರು 2.5 ಸಾವಿರ ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಮೂಲಕ ಮುಂದಿನ ಚುನಾವಣೆಗೆ ಕಾರ್ಯಕರ್ತರ ಹುರುಪು ತುಂಬಿದರು.ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಳೆದ ಎರಡು ದಿನಗಳಿಂದ ಪ್ರವಾಸಲ್ಲಿದ್ದಾರೆ. ಜಿಲ್ಲೆಯಲ್ಲಿ ಇದೇ ಪ್ರಥಮ ಭಾರಿಗೆ ಸಿಎಂ ಸಿದ್ದರಾಮಯ್ಯ ಆರು ಕ್ಷೇತ್ರಗಳಿಗೂ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿದ್ದಾರೆ. ನಗರದ ವಿಕಾಸಾಶ್ರಮ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 148 ಕೋಟಿ ವೆಚ್ಚದ 54 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಮ್ಮದು ನುಡಿದಂತೆ ನಡೆದ ಸರ್ಕಾರ. ನಾವು ಪ್ರಣಾಳಿಕೆಯಲ್ಲಿ ಹೇಳಿದ ಹಾಗೇ ಎಲ್ಲಾ ಕಾರ್ಯವನ್ನ ಮಾಡುತ್ತಿದ್ದೇವೆ. ನಾವೇನೂ ಎಲ್ಲಾ ಕಾರ್ಯವನ್ನ ಮಾಡಿ ಮುಗಿಸಿಬಿಟ್ಟಿದ್ದೇವೆಂದು ಹೇಳಿಲ್ಲ ಎಂದು ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯನ್ನ ಕುಟುಕಿದರು.ನಂತರ ಸಿದ್ದರಾಮಯ್ಯ ಹಳಿಯಾಳಕ್ಕೆ ಆಗಮಿಸಿದರು. ಹಳಿಯಾಳ ಕ್ಷೇತ್ರದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಜನರು ಮುಖ್ಯಮಂತ್ರಿಯನ್ನ ಸ್ವಾಗತಿಸಿದರು. ಪಟ್ಟಣದ ಹೃದಯ ಭಾಗದಲ್ಲಿರುವ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಿದ್ದರಾಮಯ್ಯಗೆ ಖಡ್ಗವನ್ನ ನೀಡಿ ಗೌರವಿಸಲಾಯಿತು. ಇದಾದ ನಂತರ ಶಿವಾಜಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು 150 ಕೋಟಿ ಮೊತ್ತದ ಕಾಮಗಾರಿಗಳಿಗೆ ಸಿದ್ದರಾಮಯ್ಯ ಚಾಲನೆ ನೀಡಿದರು.ಇನ್ನು ಶಿರಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಈ ಬಾರಿ ಹಿರಿಯ ಮುಖಂಡ ಭೀಮಣ್ಣ ನಾಯ್ಕರಿಗೆ ಟಿಕೇಟ್ ನೀಡಬೇಕೆಂದು ಬೆಂಬಲಿಗರು ಘೋಷಣೆ ಕೂಗಿ ಸಿಎಂ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಒಟ್ಟಿನಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಮುಂಬರುವ ಚುನಾವಣೆಯ ಪ್ರಚಾರಕ್ಕೆ ಈಗಿನಿಂದಲೇ ಸಿದ್ಧರಾಗುವಂತೆ ಸಿಎಂ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಿದ್ರು.

ಮೌನೇಶ್ ಪೋತರಾಜ್, ಸುದ್ದಿ ಟಿವಿ, ಶಿರಸಿ

0

Leave a Reply

Your email address will not be published. Required fields are marked *