ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಕಾಮೆಂಟ್ ಹಿನ್ನೆಲೆ, ಸಂಪತ್ ಕುಮಾರ್ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೊರೆಸ್ವಾಮಿಯನ್ನು ನಾಯಿಗೆ ಹೋಲಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ನಾಗೇಶ್ ಆರೋಪಿಸಿ ಸಂಪತ್ ವಿರುದ್ಧ ದೂರು ದಾಖಲಿಸಿದ್ದಾರೆ. ಗೌರಿ ಲಂಕೇಶ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿಯನ್ನು ಕಿತ್ತಿಸೆಯಿರಿ ಎಂದು ದೊರೆಸ್ವಾಮಿ ಹೇಳಿಕೆ ನೀಡಿದ್ದರು. ದೊರೆಸ್ವಾಮಿಯವರ ಈ ಹೇಳಿಕೆಯನ್ನು ವಿರೋಧಿಸಿ ‘ನಾಯಿ ಬೊಗಳಿದರೆ ದೇವಲೋಕ ಹಾಳಾಗಲ್ಲ’ ಎಂದು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದ ಸಂಪತ್ ಕುಮಾರ್ ವಿರುದ್ಧ ದೂರು ದಾಖಲಿಸಲಾಗಿದೆ.