ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ…

ಕಾಂಗ್ರೆಸ್​ನಲ್ಲಿ ಚುನಾವಣಾ ಸಿದ್ಧತೆಯೊಂದಿಗೆ ಪಕ್ಷದ ಎಲ್ಲ ಹಂತದ ಪದಾಧಿಕಾರಿಗಳಿಗೂ ಹೊಣೆಗಾರಿಕೆ ಹೊರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಇಂದು ಮೊದಲ ಬಾರಿಗೆ ಎಲ್ಲ 224 ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳ ಜೊತೆ ಕಾಂಗ್ರೆಸ್​ ನಾಯಕರು ಸಭೆ ನಡೆಸಿದರು. ಈ ಸಭೆಯಲ್ಲಿ ಪ್ರತೀ ಬೂತ್ ಮಟ್ಟದ ಮತದಾರರಲ್ಲಿ ಕಾಂಗ್ರೆಸ್​ ಪರ ಒಲವು ಮೂಡಿಸಲು ಕಾರ್ಯತಂತ್ರ ಹೆಣೆಯಲಾಗಿದೆ.ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್ ಈಗಾಗಲೇ ತಾಲೀಮು ತೀವ್ರಗೊಳಿಸಿದೆ. ಈ ನಿಟ್ಟಿನಲ್ಲಿ ಪಕ್ಷದ ನಾಯಕರು ಮೊದಲ ಬಾರಿಗೆ ವಿಭಿನ್ನವಾಗಿ ಎಲ್ಲ ಹಂತದ ಪದಾಧಿಕಾರಿಗಳನ್ನೂ ಒಳಗೊಂಡ ವಿಶೇಷ ಸಭೆ ನಡೆಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಮ್ಮ ಕ್ಷೇತ್ರ – ನಮ್ಮ ಹೊಣೆ ಹೆಸರಿನಲ್ಲಿ ಕೆಪಿಸಿಸಿ ವತಿಯಿಂದ ಸಭೆ ನಡೆದಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎಸ್.ಆರ್.ಪಾಟೀಲ್, ದಿನೇಶ್ ಗುಂಡೂರಾವ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸಚಿವ ಡಿ.ಕೆ.ಶಿವಕುಮಾರ್, ಎಐಸಿಸಿ ರಾಜ್ಯ ಉಸ್ತುವಾರಿಗಳು ಸೇರಿ ಹಲವರು ಭಾಗಿಯಾಗಿದ್ರು.

ಇನ್ನು ಎಲ್ಲ ಜಿಲ್ಲೆಗಳ ಪಕ್ಷದ ಅಧ್ಯಕ್ಷರೂ, ಬ್ಲಾಕ್ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಎಲ್ಲ 224 ವಿಧಾನಸಭೆ ಕ್ಷೇತ್ರಗಳ ಮುಖಂಡರೂ ಭಾಗಿಯಾಗಿದ್ರು. ಎಲ್ಲ 224 ವಿಧಾನಸಭೆ ಕ್ಷೇತ್ರಗಳಲ್ಲೂ ಬೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆ ಕುರಿತು ಸಭೆಯಲ್ಲಿ ನಾಯಕರು ಪದಾಧಿಕಾರಿಗಳಿಗೆ ಸಲಹೆ – ಸೂಚನೆಗಳನ್ನು ನೀಡಿದರು..ಸಭೆಯಲ್ಲಿ ಚುನಾವಣೆಗೆ ಕಾರ್ಯತಂತ್ರ, ಪ್ರತಿಪಕ್ಷಗಳ ತಂತ್ರಕ್ಕೆ ಪ್ರತಿ ತಂತ್ರ, ಮತದಾರರ ಮನವೊಲಿಸಲು ಕಾರ್ಯಸಿದ್ಧತೆ, ಬೂತ್ ಮಟ್ಟದಲ್ಲಿ ಮುಖಂಡರ ಹೊಣೆಗಾರಿಕೆ, ಕೇಂದ್ರದ ಬಿಜೆಪಿ ವೈಫಲ್ಯ ಹಾಗೂ ರಾಜ್ಯ ಸರಕಾರದ ಸಾಧನೆಗಳನ್ನು ಜನತೆಗೆ ಮನವರಿಕೆ ಮಾಡಿಕೊಡುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಸಿ, ಸಮಾಲೋಚನೆ ನಡೆಸಲಾಯ್ತು..ಇನ್ನು ವಿಧಾನಸಭೆ ಕ್ಷೇತ್ರಗಳ ಉಸ್ತುವಾರಿಗಳಿಗೆ ನಾಯಕರು ಒಂದಷ್ಟು ಟಾಸ್ಕ್​ಗಳನ್ನೂ ನಿಗದಿ ಮಾಡಿದರು.. ಒಟ್ಟಾರೆ ಕಾಂಗ್ರೆಸ್​ನ ಪದಾಧಿಕಾರಿಗಳ ಸಭೆಯಲ್ಲಿ ಚುನಾವಣೆ ಸಂದರ್ಭದಲ್ಲಿ ಒಗ್ಗಟ್ಟಿನಿಂದ ಪಕ್ಷ ಅಧಿಕಾರಕ್ಕೆ ಬರಲು ಶ್ರಮಿಸಬೇಕೆಂಬ ಸಂದೇಶ ರವಾನೆ ಆಯ್ತು.

ಮಸೂದ್ ದೊಡ್ಡೇಬಾಗಿಲು, ಸುದ್ದಿ ಟಿವಿ.

0

Leave a Reply

Your email address will not be published. Required fields are marked *