ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಪದಗ್ರಹಣಕ್ಕೆ ಸಿದ್ಧತೆ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನಾಳೆ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ ಅಧಿಕಾರ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದ್ದು, ಸುಮಾರು 40 ಸಾವಿರ ಜನರಿಗೆ ಆಸನದ ವ್ಯವಸ್ಥೆ ಸೇರಿದಂತೆ ಕೆಪಿಸಿಸಿ ವತಿಯಿಂದ ಸಮಾರಂಭಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ.. ಕಾರ್ಯಕ್ರಮಕ್ಕೆ ಪ್ರತಿ ಜಿಲ್ಲೆಗಳ ಕಾಂಗ್ರೆಸ್​ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಮುಖಂಡರಿಗೆ ಆಹ್ವಾನ ನೀಡಲಾಗಿದೆ. ರಾಜ್ಯ ಕಾಂಗ್ರೆಸ್​ ಉಸ್ತುವಾರಿ ವೇಣುಗೋಪಾಲ್, ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.. ಅರಮನೆ ಮೈದಾನದ ಬಳಿ ಕಾಂಗ್ರೆಸ್ ಫ್ಲೆಕ್ಸ್​​ಗಳು ರಾರಾಜಿಸುತ್ತಿವೆ. ದಿನೇಶ್ ಗುಂಡೂರಾವ್ ಅವರ 40 ಅಡಿ ಎತ್ತರದ ಕಟೌಟ್ ನಿರ್ಮಾಣ ಮಾಡಲಾಗಿದೆ. ಇನ್ನು ನೂತನವಾಗಿ ಆಯ್ಕೆಯಾದ ಎಲ್ಲಾ ಶಾಸಕರನ್ನು ಸನ್ಮಾನಿಸೋದಕ್ಕೂ ತೀರ್ಮಾನ ಮಾಡಲಾಗಿದೆ.. ಪದಗ್ರಹಣ ಸಮಾರಂಭದ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಲಿದೆ.

0

Leave a Reply

Your email address will not be published. Required fields are marked *