ಮುಂಬೈ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ

ಮುಂಬೈ: ಮುಂಬೈನ ಅಪ್ಪಾ ಸಾಹೇಬ್ ಮಾರ್ಗದ ವೋರ್ಲಿ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬಿಯೊ ಮೊಂಡೆ ಟವರ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡಕ್ಕೆ ಸಿಲುಕಿದ್ದ 90 ಜನರನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ 10 ಅಗ್ನಿಶಾಮಕ ವಾಹನ, 5 ಟ್ಯಾಂಕರ್, ಆಂಬುಲೆನ್ಸ್​​ಗಳು ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ. ನಟಿ ದೀಪಿಕಾ ಪಡುಕೋಣೆಯವರು ಇದೇ ಕಟ್ಟಡದ 26ನೇ ಅಂತಸ್ತಿನಲ್ಲಿ ವಾಸವಾಗಿದ್ದಾರೆ. ಮೊದಲು ಎರಡನೇ ಹಂತದಲ್ಲಿ ಕಾಣಿಸಿಕೊಂಡ ಬೆಂಕಿ ನೋಡ ನೋಡುತ್ತಿದ್ದಂತೆ ಮೂರನೇ ಹಂತಕ್ಕೆ ಕೂಡ ವ್ಯಾಪಿಸಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ರಕ್ಷಣಾ ಪಡೆಗಳನ್ನು ಸ್ಥಳಕ್ಕೆ ಕರೆಸಲು ಸ್ಥಳೀಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

0

Leave a Reply

Your email address will not be published. Required fields are marked *