ಮೊದಲು ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಲಿ.- ಯಡಿಯೂರಪ್ಪ

ಮೊದಲು ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಲಿ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ಕೊಡಿಸುತ್ತೇವೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ ಯಡಿಯೂರಪ್ಪ ತಿಳಿಸಿದ್ದಾರೆ.. ಚಿಕ್ಕಬಳ್ಳಾಪುರದಲ್ಲಿ ಬರ ಅಧ್ಯಯನದ ವೇಳೆ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಸ್ಪಷ್ಟ ನಿಲುವು ಅಥವಾ ಆದೇಶ ಹೊರಡಿಸಲಿ ಅಂತ ಆಗ್ರಹಿಸಿದ್ರು. ಚಿಕ್ಕಬಳ್ಳಾಪುರ ತಾಲೂಕಿನ ಮಂಚನಬಲೆ ಕೆರೆ ಮತ್ತು ಚಿತ್ರಾವತಿ ಕೆರೆಯನ್ನ ವೀಕ್ಷಣೆ ನಡೆಸಿದ್ರು. ಬಳಿಕ ಮಾತನಾಡಿದ ಬಿಎಸ್ ವೈ ಸರ್ಕಾರದ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ರು.

0

Leave a Reply

Your email address will not be published. Required fields are marked *