ನ. 9ಕ್ಕೆ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಿಸಿದ್ದು, ನವೆಂಬರ್​ 9ರಂದು ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್​ 18ರಂದು ಫಲಿತಾಂಶ ಪ್ರಕಟವಾಗಲಿದೆ.

ಅಕ್ಟೋಬರ್​ 16ರಿಂದ ಚುನಾವಣಾ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದ್ದು, ಅಕ್ಟೋಬರ್​ 26ರ ಒಳಗೆ ನಾಮಪತ್ರ ವಾಪಸ್​ ಪಡೆಯಲು ಅವಕಾಶ ನೀಡಲಾಗಿದೆ. 49.05 ಲಕ್ಷ ಮತದಾರರನ್ನು ಹೊಂದಿರುವ ಹಿಮಾಚಲ ಪ್ರದೇಶದಲ್ಲಿ 7,521 ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ. ಇಂದಿನಿಂದಲೇ ಹಿಮಾಚಲ ಪ್ರದೇಶದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.

ಇನ್ನು ಗುಜರಾತ್​ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗದ ಮುಖ್ಯಸ್ಥ ಎ. ಕೆ. ಜ್ಯೋತಿ ಹೇಳಿದ್ದಾರೆ. ಹಿಮಾಚಲ ಪ್ರದೇಶದ ಫಲಿತಾಂಶ ಪ್ರಕಟವಾಗುವ ಮುನ್ನ ಅಥವಾ ಅದರ ಬಳಿಕ ಗುಜರಾತ್​ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಘೋಷಿಸುವ ಸಾಧ್ಯತೆ ಇದೆ.

0

Leave a Reply

Your email address will not be published. Required fields are marked *