ಗಡಿ ಜಿಲ್ಲೆಗಳಿಗೂ ವಿಸ್ತರಣೆಯಾದ ಇಂದಿರಾ ಕ್ಯಾಂಟೀನ್..

ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲೊಂದಾದ ಇಂದಿರಾ ಕ್ಯಾಂಟೀನ್ ಜಿಲ್ಲೆಗಳಿಗೂ ವಿಸ್ತರಣೆಯಾಗಿದೆ. ಚಾಮರಾಜನಗರ, ಬಳ್ಳಾರಿ ಹಾಗೂ ಮಂಡ್ಯದಲ್ಲಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆಗೊಂಡಿದೆ. ಈ ಮೂಲಕ ರಾಜಧಾನಿ ಬೆಂಗಳೂರಿಗರ ಹೊಟ್ಟೆ ತಣಿಸಿದ್ದ ಯೋಜನೆ ರಾಜ್ಯಾದ್ಯಂತ ವಿಸ್ತರಣೆಯಾಗ್ತಿದೆ…ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಇತರೇ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ. ಇಂದು ಚಾಮರಾಜನಗರ, ಬಳ್ಳಾರಿ ಹಾಗೂ ಮಂಡ್ಯದಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆಗೆ ಚಾಲನೆ ನೀಡಲಾಯ್ತು. ಚಾಮರಾಜನಗರದಲ್ಲಿ 85 ಲಕ್ಷ ರೂ. ವೆಚ್ಚದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿದೆ. ಬಿ. ರಾಚಯ್ಯ ಜೋಡಿ ರಸ್ತೆಯಲ್ಲಿರೋ ಜಿಲ್ಲಾಡಳಿತ ಭವನದ ಗೇಟ್ ಬಳಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆಯಾಗಿದೆ. ಇಂದಿರಾ ಕ್ಯಾಂಟೀನ್ ಕಟ್ಟಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಗೀತಾ ಮಹದೇವಪ್ರಸಾದ್ ಚಾಲನೆ ನೀಡಿದ್ರು. ಶಾಸಕ ಸಿ.ಪುಟ್ಟರಂಗಶೆಟ್ಟಿ, ನಗರಸಭೆ ಅಧ್ಯಕ್ಷೆ ಶೋಭಾ, ಜಿಲ್ಲಾಢಿಕಾರಿ ಬಿ.ರಾಮು ಸಾಥ್ ನೀಡಿದ್ರು….

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವೆ ಗೀತಾ ಮಹಹೇವಪ್ರಸಾದ್, ರಾಜ್ಯ ಸರ್ಕಾರದ ಮಹತ್ವದ ಯೋಜನೆಯನ್ನು ಚಾಮರಾಜನಗರದಲ್ಲಿ ಆರಂಭಿಸಲಾಗಿದೆ. ಪ್ರತಿಯೊಬ್ಬರೂ ಇದರ ಉಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದ್ರು.ಇನ್ನು ಗಣಿನಾಡು ಬಳ್ಳಾರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ್ರು. ನಗರದ ಎಪಿಎಂಸಿ, ಬೆಳಗಲ್ ಕ್ರಾಸ್, ವಿಮ್ಸ್ ಆಸ್ಪತ್ರೆ ಆವರಣ, ಪಾಲಿಕೆ ಹಿಂಭಾಗ ಮತ್ತು ಜಿಲ್ಲಾಸ್ಪತ್ರೆ ಆವರಣಗಳಲ್ಲಿ ಒಟ್ಟು 5 ಇಂದಿರಾ ಕ್ಯಾಂಟೀನ್​ಗಳನ್ನು ಆರಂಭಿಸಲಾಗಿದೆ. ಈ ಮೂಲಕ ದುಡಿಯೋ ಹೊಟ್ಟೆಯ ಹಸಿವನ್ನು ನೀಗಿಸೋಕೆ, ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮುಂದಾಗಿದೆ. ಸಕ್ಕರೆ ನಾಡು ಮಂಡ್ಯದಲ್ಲೂ ಇಂದಿರಾ ಕ್ಯಾಂಟೀನ್ ಪರ್ವ ಆರಂಭವಾಗಿದೆ. ಮಂಡ್ಯದ ಸಂಜಯ್ ವೃತ್ತ, ಡಿಎಚ್.ಒ ಕಚೇರಿ ಬಳಿ ಇಂದಿರಾ ಕ್ಯಾಂಟೀನ್ ತೆರೆಯಲಾಗಿದ್ದು, ಉಸ್ತುವಾರಿ ಸಚಿವ ಕೃಷ್ಣಪ್ಪ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿದ್ರು. ಡಿಸಿ ಮಂಜುಶ್ರೀ, ಸಿಇಓ ಶರತ್ ಸೇರಿ ಹಲವು ಮುಖಂಡ್ರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪಹಾರ ಸೇವಿಸಿದ್ರು.ಒಟ್ಟಾರೆ, ನಾಡಿನ ಇತರೇ ಜಿಲ್ಲೆಗಳಿಗೂ ಇಂದಿರಾ ಕ್ಯಾಂಟೀನ್ ಯೋಜನೆ ವಿಸ್ತರಣೆಯಾದಂತಾಗಿದೆ. ಈ ಮೂಲಕ ರಾಜ್ಯದ ಜನರ ಹಸಿವನ್ನು ಕನಿಷ್ಠ ದರದಲ್ಲಿ ತೀರಿಸೋ ಕೆಲಸ ನಡೀತಿದೆ. ಈ ಮೂಲಕ ಕನ್ನಡಿಗರ ಹಸಿವು ನೀಗಿಸುವ ತೃಪ್ತಿ ಸರ್ಕಾರದ್ದಾಗಿದೆ.

ಬ್ಯೂರೋ ರಿಪೋರ್ಟ್ ಸುದ್ದಿ ಟಿವಿ

0

Leave a Reply

Your email address will not be published. Required fields are marked *