ಜಯಾ ಸಾವು: ಶಶಿಕಲಾ ವಿಚಾರಣೆ ನಡೆಸಲಿರುವ ವಿಚಾರಣಾ ಆಯೋಗ

ಚೆನ್ನೈ: ತಮಿಳುನಾಡಿನ ಮಾಜಿ ಸಿಎಂ ಜೆ. ಜಯಲಲಿತಾ ಸಾವಿನ ತನಿಖೆ ನಡೆಸುತ್ತಿರುವ ನಿವೃತ್ತ ನ್ಯಾಯಮೂರ್ತಿ ಆರ್ಮುಗಸ್ವಾಮಿ ನೇತೃತ್ವದ ವಿಚಾರಣಾ ಆಯೋಗವು ಎಐಎಡಿಎಂಕೆ ಪಕ್ಷದ ಉಚ್ಛಾಟಿತ ನಾಯಕಿ ಶಶಿಕಲಾ ಅವರನ್ನು ವಿಚಾರಣೆಗೆ ಒಳಪಡಿಸಲು ನಿರ್ಧರಿಸಿದೆ. ಈ ಸಂಬಂಧ ಒಂದೆರಡು ದಿನಗಳಲ್ಲಿ ವಿಚಾರಣೆ ನಡೆಯುವ ಸಾಧ್ಯತೆ ಇದೆ.

ಭ್ರಷ್ಟಾಚಾರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸದ್ಯಕ್ಕೆ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಶಶಿಕಲಾ ಅವರ ವಿಚಾರಣೆ ನಡೆಯಬೇಕಿದೆ. ಈಗಾಗಲೇ ತಮ್ಮ ವಿಚಾರಣೆ ಕುರಿತು ದಾಖಲೆಗಳನ್ನು ಕಳುಹಿಸಿ ಎಂದು ಶಶಿಕಲಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

0

Leave a Reply

Your email address will not be published. Required fields are marked *