ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ದಿನಾಂಕ ನಿಗದಿ..

ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಜೂನ್ 11ರಂದು ಚುನಾವಣೆ ನಡೆಯಲಿದೆ. ಈ ಬಗ್ಗೆ ಮೇ 18ರಂದು ರಾಜ್ಯ ಗೆಜೆಟ್‌ನಲ್ಲಿ ಅಧಿಸೂಚನೆ ಹೊರಡಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದೆ.ಮೇ 25ರಂದು ಬಿಜೆಪಿ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಜೂನ್ 26ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದೆ. 28ಕ್ಕೆ ನಾಮಪತ್ರ ಹಿಂದಕ್ಕೆ ಪಡೆಯಬಹುದಾಗಿದೆ. ಜೂನ್ 11 ರಂದು ಮತದಾನ ನಡೆಯಲಿದ್ದು, ಜೂನ್ 13 ರಂದು ಮತ ಎಣಿಕೆ ನಡೆಸಲು ಕೇಂದ್ರ ಚುನಾವಣಾ ಆಯೋಗ ತಾತ್ವಿಕ ಒಪ್ಪಿಗೆ ನೀಡಿದೆ. ಜೂನ್ 15ರ ಒಳಗಾಗಿ ಚುನಾವಣಾ ಪ್ರಕ್ರಿಯೆ ಮುಗಿಸಲು ಸೂಚನೆ ನೀಡಿದೆ. ಮೇ 4 ರಂದು ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ವಿಜಯ್ ಕುಮಾರ್ ಹೃದಯಾಘಾತದಿಂದ ಮೃತಪಟ್ಟಿದ್ದರು. ಹೀಗಾಗಿ ಆಯೋಗ ಚುನಾವಣೆಯನ್ನು ಮುಂದೂಡಿತ್ತು.

0

Leave a Reply

Your email address will not be published. Required fields are marked *