ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಸ್ಥಳದಲ್ಲೇ ಸಾವು​..!

ಬೆಂಗಳೂರು: ಲಾರಿ ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರ್ ರಸ್ತೆ ಆರ್.ವಿ ಕಾಲೇಜ್ ಬಳಿ ಘಟನೆ ನಡೆದಿದೆ. ಶಿವಯ್ಯ ಮೃತ ಚಾಲಕನಾಗಿದ್ದು, ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಚಾಲಕ ನಿಯಂತ್ರಣ ತಪ್ಪಿ ಮೆಟ್ರೋ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತ ನಡೆದ ಕಾರಣ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0

Leave a Reply

Your email address will not be published. Required fields are marked *