ಬಿಜೆಪಿ ತೊರೆದ ಶಾಸಕ ಆನಂದ್ ಸಿಂಗ್ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಈ ವೇಳೆ ಮಾತನಾಡಿದ ಆನಂದ್ ಸಿಂಗ್, ಕಾಂಗ್ರೆಸ್ ನಲ್ಲಿ ಜಾತ್ಯತೀತ ತತ್ವ, ಸಿದ್ಧಾಂತಗಳಿವೆ. ಹೀಗಾಗಿ ನಾನು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಅಂತ ಹೇಳಿದ್ರು.