ಮೈಸೂರು ರಾಜಮನೆತನಕ್ಕೆ ಯುವರಾಜನ ಆಗಮನ…

6 ದಶಕಗಳ ಬಳಿಕ ಮೈಸೂರು ಸಂಸ್ಥಾನದ ಯದುವಂಶಕ್ಕೆ ಪುತ್ರ ಪ್ರಾಪ್ತಿಯಾಗಿದೆ. ರಾಣಿ ತ್ರಿಷಿಕಾ ಕುಮಾರಿ ಗಂಡು ಮಗುವಿನ ಜನ್ಮ ನೀಡಿದ್ದು, ರಾಜಮಾತೆ ಪ್ರಮೋದದೇವಿ ಮತ್ತು ರಾಜ ಯದುವೀರ್ ಮುಖದಲ್ಲಿ ಮಂದಹಾಸ ಮೂಡಿದೆ. ಈ ನಡುವೆ ಯುವರಾಜನ ಆಗಮನದಿಂದ ಅರಮನೆಯಲ್ಲಿ ಸಂತಸ ಮನೆ ಮಾಡಿದೆ.ಮೈಸೂರು ಒಡೆಯರ್ ಯದುವೀರ್ ದಂಪತಿಗೆ ಗಂಡು ಮಗು ಜನನವಾಗಿದ್ದು, ರಾಜವಂಶಸ್ಥ ಮನೆತನದಲ್ಲಿ ಸಂಭ್ರಮ ಮನೆಮಾಡಿದೆ. ಬೆಂಗಳೂರಿನ ಇಂದಿರಾ ನಗರದ ಖಾಸಗಿ ಆಸ್ಪತ್ರೆಯಲ್ಲಿ ರಾಣಿ ತ್ರಿಷಿಕಾ ಕುಮಾರಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ನಡುವೆ ತ್ರಿಷಿಕಾ ಜೊತೆಯಲ್ಲೇ ಇದ್ದು ಪತ್ನಿ ಮತ್ತು ಮಗನ ಆರೋಗ್ಯ ಯಧುವೀರ್ ವಿಚಾರಿಸಿದ್ದಾರೆ. ಹಾಗೇ ರಾಜಮಾತೆ ಪ್ರಮೋದಾ ದೇವಿ ಮತ್ತು ತ್ರಿಷಿಕಾ ಸಂಬಂಧಿಕರು ತಾಯಿ ಮತ್ತು ಮಗುವಿನ ಆರೋಗ್ಯ ವಿಚಾರಿಸಿದ್ರು. ಆದ್ರೆ ತ್ರಿಷಿಕಾ ತಾಯಿ, ರಾತ್ರಿಯಿಡೀ ಜೊತೆಯಲ್ಲೇ ಇದ್ದು, ಯೋಗಕ್ಷೇಮ ನೋಡಿಕೊಂಡಿದ್ದಾರೆ.

ಆರೋಗ್ಯ ತಪಾಸಣೆ ಹಿನ್ನಲೆ ತ್ರಿಷಿಕಾರನ್ನು ಬೆಂಗಳೂರಿನ ಇಂದಿರಾನಗರದ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಈ ನಡುವೆ ತಡರಾತ್ರಿ 9.50 ಕ್ಕೆ ತ್ರಿಷಿಕಾ ಗಂಡುಮಗುವಿಗೆ ಜನ್ಮ ನೀಡಿದ್ರು.. ಪುನರ್ವಸು ನಕ್ಷತ್ರದಲ್ಲಿ ಗಂಡು ಮಗು ಜನನವಾಗಿದ್ದು ಜ್ಯೋತಿಷ್ಯದ ಪ್ರಕಾರ ಶ್ರೀರಾಮನು ಇದೇ ನಕ್ಷತ್ರದಲ್ಲಿ ಹುಟ್ಟಿದವನು ಎನ್ನಲಾಗಿದೆ.ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಜನಿಸಿದ ಅಂದಿನ ಸಂದರ್ಭದಲ್ಲಿ ಇಡೀ ಮೈಸೂರು ನಗರಕ್ಕೆ ಎತ್ತಿನ ಗಾಡಿಗಳಲ್ಲಿ ಸಿಹಿ ತಿಂಡಿಯನ್ನು ಕೊಂಡೊಯ್ದು ಜನರಿಗೆ ಹಂಚಲಾಗಿತ್ತು. 1953ರಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಜನಿಸಿದ ನಂತರ ಮೈಸೂರು ರಾಜಮನೆತನದಲ್ಲಿ ಗಂಡು ಸಂತಾನ ಪ್ರಾಪ್ತಿಯಾಗಿರಲಿಲ್ಲ. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ದಂಪತಿಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ಯದುವೀರ್ ರನ್ನು ರಾಜಮನೆತನದ ಉತ್ತರಾಧಿಕಾರಿಯನ್ನಾಗಿ ಪ್ರಮೋದಾದೇವಿ ಒಡೆಯರ್ ದತ್ತು ಪಡೆದಿದ್ರು.ಒಟ್ಟಿನಲ್ಲಿ ಯುವರಾಜನ ಆಗಮನದಿಂದ ಮೈಸೂರು ರಾಜಮನೆತನದ ಕುಟುಂಬ ಸದಸ್ಯರಲ್ಲಿ ಇದೀಗ ಸಂಭ್ರಮ ಮನೆ ಮಾಡಿದೆ. ಈ ನಡುವೆ ಯುವರಾಜನ ಆಗಮನದಿಂದ ಇಂದು ತಾಯಿ ಚಾಮುಂಡೇಶ್ವರಿಗೆ ಒಡೆಯರ್ ವಂಶಸ್ಥರು ಪೂಜೆ ಸಲ್ಲಿಸುವ ಸಾಧ್ಯತೆ ಇದೆ.

ಗಂಗಾಧರ್ ವಾಗಟ..ಕ್ರೈಂ ಬ್ಯೂರೋ ಸುದ್ದಿಟಿವಿ

0

Leave a Reply

Your email address will not be published. Required fields are marked *