ಬಸ್ ಪ್ರಯಾಣ ದರ ಇಳಿಸಲು ಒತ್ತಾಯಿಸಿದ ತಮಿಳುನಾಡು ವಿಪಕ್ಷಗಳು

ಚೆನ್ನೈ: ತಮಿಳುನಾಡಿನಲ್ಲಿ ಬಸ್ ಪ್ರಯಾಣ ದರ ಏರಿಕೆ ವಿರೋಧಿಸಿ ಡಿಎಂಕೆ ಕಾರ್ಯಾಧ್ಯಕ್ಷ ಎಂ ಕೆ ಸ್ಟಾಲಿನ್ ನೇತೃತ್ವದಲ್ಲಿ ವಿಪಕ್ಷಗಳು ಪ್ರತಿಭಟನೆ ನಡೆಸಿದವು. ಚೆನ್ನೈನಲ್ಲಿ ಪ್ರತಿಭಟನೆ ವೇಳೆ ಪ್ರತಿಕ್ರಿಯಿಸಿದ ಸ್ಟಾಲಿನ್ ಡಿಎಂಕೆ ಮೈತ್ರಿಕೂಟ ನಡೆಸಿದ ಪ್ರತಿಭಟನೆ ಯಶಸ್ವಿಯಾಗಿದೆ. ಸರ್ಕಾರ ತಕ್ಷಣ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಜೊತೆಗೆ ಸರ್ಕಾರ ದರ ಏರಿಕೆ ಹಿಂಪಡೆಯದಿದ್ದಲ್ಲಿ ಮುಂದಿನ ದಿನಗಳಲ್ಲಿ ವ್ಯಾಪಕವಾಗಿ ಪ್ರತಿಭಟಿಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಬಸ್ ಪ್ರಯಾಣ ದರ ಏರಿಕೆ ಜನರ ಮೇಲಿನ ದೌರ್ಜನ್ಯ ಎಂದು ಎಂಡಿಎಂಕೆ ಪಕ್ಷದ ನಾಯಕ ವೈಕೋ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಎಲ್ಲ ವಿಪಕ್ಷಗಳು ಒಗ್ಗೂಡಿವೆ. ಸರ್ಕಾರ ತಕ್ಷಣ ದರ ಏರಿಕೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಅಂತಿಮ ದಿನಗಳನ್ನು ಎಣಿಸುತ್ತಿರುವ ಸಂಗತಿ ಸರ್ಕಾರಕ್ಕೆ ಗೊತ್ತಿದೆ. ಆದ್ದರಿಂದ ಸಾಧ್ಯವಾದಷ್ಟೂ ಲೂಟಿ ಮಾಡುವ ಕೆಲಸದಲ್ಲಿ ಸರ್ಕಾರ ನಿರತವಾಗಿದೆ ಎಂದು ಆರೋಪಿಸಿದರು.

0

Leave a Reply

Your email address will not be published. Required fields are marked *