ಅಮೆರಿಕ ಭೇಟಿಗೆ ತೆರಳಲಿರುವ ಪ್ರಧಾನಿ ನರೇಂದ್ರ ಮೋದಿ

ವಾಷಿಂಗ್ಟನ್: ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕ ಪ್ರವಾಸಕ್ಕೆ ತೆರಳುವುದಕ್ಕೆ ವೇದಿಕೆ ಸಿದ್ಧವಾಗಿದೆ. ಈ ಕುರಿತು ಅಮೆರಿಕ ರಾಜ್ಯ ವ್ಯವಹಾರಗಳ ವಕ್ತಾರ ಹೀತರ್ ನೂರ್ಟ್ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ​​. ಅವರ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರು ಮುಂದಿನ ತಿಂಗಳು ವಾಷಿಂಗ್ಟನ್​ಗೆ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ವಾಷಿಂಗ್ಟನ್ ಭೇಟಿಗಾಗಿ ಎದುರು ನೋಡುತ್ತಿರುವುದಾಗಿ ಅವರು ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕಾಗೆ ಭೇಟಿ ನೀಡಲಿದ್ದಾರೆ. ಶೀಘ್ರದಲ್ಲೇ ದಿನಾಂಕವನ್ನು ಪ್ರಕಟಿಸುವ ಸಾಧ್ಯತೆ ಇದೆ. ಈ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ಇದೇ ಮೊದಲ ಬಾರಿ ಭೇಟಿಯಾಗಲಿದ್ದಾರೆ. ಟ್ರಂಪ್ ಅಮೆರಿಕ ಅಧ್ಯಕ್ಷರಾದ ನಂತರ ಮೂರು ಬಾರಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.

ಇನ್ನು ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ಮೋದಿಯವರು ಒಟ್ಟು 8 ಬಾರಿ ಭೇಟಿಯಾಗಿದ್ದರು. 2015ರ ಗಣರಾಜ್ಯೋತ್ಸವ ದಿನಕ್ಕೆ ಬರಾಕ್ ಒಬಾಮ ಆಗಮಿಸಿದ್ದರು. ಕಳೆದ ಕೆಲವು ದಿನಗಳಿಂದ ವಿದೇಶ ಪ್ರವಾಸದಿಂದ ದೂರ ಉಳಿದಿದ್ದ ಪ್ರಧಾನಿ ಮೋದಿಯವರ ಪ್ರವಾಸ ಪರ್ವಕ್ಕೆ ಮತ್ತೆ ಚಾಲನೆ ದೊರಕಿದೆ. ಇತ್ತೀಚೆಗೆ ಫ್ರಾನ್ಸ್, ರಷ್ಯಾ ಸೇರಿದಂತೆ ನಾಲ್ಕು ರಾಷ್ಟ್ರಗಳಿಗೆ ಆರು ದಿನಗಳ ಕಾಲ ಪ್ರವಾಸಕ್ಕೆ ತೆರಳಿದ್ದ ಪ್ರಧಾನಿ ಮೋದಿ, ಸದ್ಯಕ್ಕೆ ಎರಡು ದಿನಗಳ ಕಾಲ ಕಜಕಿಸ್ತಾನದಲ್ಲಿದ್ದಾರೆ.

ಪ್ರದೀಪ್ ಮಾಲ್ಗುಡಿ ನ್ಯಾಷನಲ್ ಡೆಸ್ಕ್ ಸುದ್ದಿ ಟಿವಿ

0

Leave a Reply

Your email address will not be published. Required fields are marked *