ಮೇಯರ್ ಭಾಗ್ಯವತಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು

ಕಾಂಗ್ರೆಸ್ ಪಕ್ಷ ತಿರಸ್ಕರಿಸಿ ಅಪವಿತ್ರ ಮೈತ್ರಿಯೊಂದಿಗೆ ನೂತನವಾಗಿ ಆಯ್ಕೆಯಾಗಿರುವ ಮೇಯರ್ ಭಾಗ್ಯವತಿರವರು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿದ್ಯಾರ್ಥಿ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು. ಮೈಸೂರಿನ ಮಹಾನಗರ ಪಾಲಿಕೆಯ ಮುಂಭಾಗ ಸಮಾವೇಶಗೊಂಡ ಪ್ರತಿಭಟನಾಕಾರರು ಮೇಯರ್ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಮಾತನಾಡಿ ಕಾಂಗ್ರೆಸ್ ಪಕ್ಷದಿಂದ ಅಧಿಕೃತವಾಗಿ ವಾರ್ಡ್ ನಂ 23 ರಲ್ಲಿ ನಗರ ಪಾಲಿಕೆಯ ಸದಸ್ಯರಾಗಿ ಆಯ್ಕೆಯಾಗಿರುವ ಭಾಗ್ಯವತಿರವರು ಪಕ್ಷಕ್ಕೆ ದ್ರೋಹ ಮಾಡಿ ಜೆ ಡಿ ಎಸ್ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರದ ದುರಾಸೆಯಿಂದ ಮೇಯರ್ ಸ್ಥಾನ ಅಲಂಕರಿಸಿದ್ದಾರೆ.ಇದು ಪಕ್ಷಕ್ಕೆ ಮಾಡಿದ ಅನ್ಯಾಯ. ಭಾಗ್ಯವತಿರವರು ಅವರ ಮೇಯರ್ ಹಾಗೂ ಪಾಲಿಕೆಯ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.ಒಂದು ವಾರ ಗಡುವು ನೀಡುತ್ತಿದ್ದೇವೆ. ನೀಡದೆ ಇದ್ದಲ್ಲಿ ಕೌನ್ಸಿಲ್ ಸಭೆ ವೇಳೆ ಪಾಲಿಕೆಗೆ ಮುತ್ತಿಗೆ ಹಾಕಿ,ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.ಇದೇ ವೇಳೆ ಮೇಯರ್ ಪಾಲಿಕೆಗೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಕಾರಿಗೆ ಮುತ್ತಿಗೆ ಹಾಕಿ, ಮೇಯರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

0

Leave a Reply

Your email address will not be published. Required fields are marked *