ಶಾರದ ವಿದ್ಯಾಲಯದಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

ಬೆಂಗಳೂರು: ಬೆಂಗಳೂರಿನ ತೋಟದಗುಡ್ಡದಹಳ್ಳಿಯ ಶಾರದ ವಿದ್ಯಾಲಯ 30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಅಭಿಯಾನಕ್ಕೆ ಚಾಲನೆ ನೀಡಿತು. ರಾಜ್ಯ ಪೊಲೀಸ್ ಇಲಾಖೆ ಸಹಯೋಗದಲ್ಲಿ ನಗರದ ಪ್ರತಿಷ್ಟಿತ ಶಾಲೆಗಳಲ್ಲಿ ಒಂದಾದ ಶಾರದ ವಿದ್ಯಾಲಯ ತಮ್ಮ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರೊಂದಿಗೆ ಕಾರ್ಯಕ್ರಮವನ್ನು ನಡೆಸಿತು. ಈ ಮೂಲಕ ಪ್ರತಿಯೊಬ್ಬ ನಾಗರಿಕನು ರಸ್ತೆ ಸುರಕ್ಷತಾ ನಿಯಮದ ಬಗ್ಗೆ ಮತ್ತು ರಸ್ತೆ ನಿಯಮಗಳ ಕುರಿತು ಮಾಹಿತಿ ಮತ್ತು ವಿಚಾರ ವಿನಿಮಯ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕುರಿತು ಪ್ರತಿಕ್ರಿಯಿಸಿರುವ ಶಾಲೆಯ ಆಡಳಿತ ಮಂಡಳಿ “ಇದು ನಮಗೆಲ್ಲರಿಗು ಅತ್ಯಂತ ಹೆಮ್ಮೆಯ ವಿಷಯ” ಎಂದಿದೆ. ಅಲ್ಲದೇ, ಕಾರ್ಯಕ್ರಮವನ್ನು ನಡೆಸಿಕೊಟ್ಟ ಪೊಲೀಸ್ ಇಲಾಖೆಗೆ ಧನ್ಯವಾದಗಳನ್ನು ಅರ್ಪಿಸಿದೆ.

0

Leave a Reply

Your email address will not be published. Required fields are marked *