ಕೇಂದ್ರ ಸರ್ಕಾರ, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಶಿವಸೇನೆ

ಮುಂಬೈ: ಕೇಂದ್ರ ಸಚಿವ ಎಂ ಜೆ ಅಕ್ಬರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ರಾಜಿನಾಮೆ ಪಡೆಯದ ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಸಂಪಾದಕೀಯದಲ್ಲಿ ವಾಗ್ದಾಳಿ ನಡೆಸಲಾಗಿದೆ. ಇದರೊಂದಿಗೆ ಮಹಾರಾಷ್ಟ್ರ ಸರ್ಕಾರದ ಉದ್ದೇಶಿತ ಮನೆಗಳಿಗೆ ಆನ್​ಲೈನ್​​ನಲ್ಲಿ ಮದ್ಯ ಸರಬರಾಜು ಮಾಡುವ ಯೋಜನೆಯನ್ನೂ ವಿಮರ್ಶಿಸಲಾಗಿದೆ.

ತನ್ನ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಬಿಜೆಪಿ 2014ರ ಲೋಕಸಭೆ ಚುನಾವಣೆಗೂ ಮುನ್ನ ಆಹಾರ, ಬಟ್ಟೆ ಮತ್ತು ವಸತಿಗಳನ್ನು ನೀಡುವ ಭರವಸೆ ನೀಡಿತ್ತು ಮತ್ತು ದೇಶವನ್ನು ನೈತಿಕ ರಾಷ್ಟ್ರ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ, ಮಹಿಳೆಯರೊಂದಿಗೆ ಅಗೌರವದಿಂದ ನಡೆದುಕೊಳ್ಳುವವರನ್ನು ಸಂಪುಟದಲ್ಲಿ ಇರಿಸಿಕೊಳ್ಳಲಾಗಿದೆ ಮತ್ತು ಮದ್ಯಪಾನವನ್ನು ಉತ್ತೇಜಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡೆಯನ್ನು ಹೆಸರು ಉಲ್ಲೇಖಿಸದೆ ವಾಗ್ದಾಳಿ ನಡೆಸಲಾಗಿದೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಉದ್ಭವಿಸಿರುವ ನೀರಿನ ಕೊರತೆಯ ಉದ್ಭವಿಸಿರುವ ಸಮಸ್ಯೆಯನ್ನು ಉಲ್ಲೇಖಿಸಲಾಗಿದ್ದು, ಇಂತಹ ಸಮಸ್ಯೆಯ ನಡುವೆ ಮನೆಮನೆಗಳಿಗೆ ಮದ್ಯ ಸರಬರಾಜು ಮಾಡುವ ನಿರ್ಧಾರವನ್ನು ಬೌದ್ಧಿಕ ಬರ ಎಂದು ವ್ಯಾಖ್ಯಾನಿಸಲಾಗಿದೆ.

ಅಲ್ಲದೇ, ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆ ಚುನಾವಣೆ ಪೂರ್ವದಲ್ಲಿ ಮನೆಗಳಿಗೆ ಮದ್ಯ ಸರಬರಾಜು ಮಾಡುವ ಯಾವುದಾದರೂ ಭರವಸೆ ನೀಡಿದ್ದರೇ? ಎಂದು ಪ್ರಶ್ನಿಸಿದ್ದಾರೆ. ಜೊತೆಗೆ, ಮದ್ಯಪಾನ ಮಾಡಿದ ನಂತರ ಜನ ವಾಹನ ಚಲಾಯಿಸುವುದಿಲ್ಲ ಎಂಬುದಕ್ಕೆ ಯಾವ ಗ್ಯಾರಂಟೀ ಇದೆ? ಎಂದು ಕೂಡ ಅವರು ಪ್ರಶ್ನಿಸಲಾಗಿದ್ದು, ಇದು ಅಚ್ಚರಿಯ ಸಂಗತಿ ಎಂದಿದೆ.

0

Leave a Reply

Your email address will not be published. Required fields are marked *