ಮಾ.23 ರಿಂದ ಏಪ್ರಿಲ್ 6 ರವರೆಗೆ ಎಸ್ಎಸ್​ಎಲ್​ಸಿ ಪರೀಕ್ಷೆ….

ಮಾರ್ಚ್ 23 ರಿಂದ ಏಪ್ರಿಲ್ 6ರವರೆಗೆ ಪರೀಕ್ಷೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಾಗಿ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಭರದ ಸಿದ್ಧತೆ ನಡೆಸಿದೆ. ಕರ್ನಾಟಕ ಸೆಕ್ಯೂರ್ ಎಕ್ಸಾಮಿನೇಷನ್ ಸಿಸ್ಟಂ ಅಡಿ ಪರೀಕ್ಷೆ ನಡೆಯಲಿದೆ. ಈ ಬಾರಿ ಪರೀಕ್ಷಾ ಪ್ರವೇಶ ಪತ್ರವನ್ನ ಶಾಲೆಯಲ್ಲೆ ವಿದ್ಯಾರ್ಥಿಗಳಿಗೆ ಡೌನ್ ಲೋಡ್ ಮಾಡಿಕೊಡಲಾಗಿದೆ. ಎಲ್ಲಾ 2817 ಪರೀಕ್ಷಾ ಕೇಂದ್ರಗಳಲ್ಲೂ ಈ ಬಾರಿ ಸಿಸಿಟಿವಿ ಅಳವಡಿಸಲಾಗಿದೆ. ಈ ಬಾರಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಿಬ್ಬಂದಿ ಗುರುತಿನ ಚೀಟಿ ಬಳಸುವುದು ಕಡ್ಡಾಯವಾಗಿದೆ. ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದ್ರೆ 5 ವರ್ಷ ಜೈಲು. ಈ ಬಾರಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಪ್ರಯಾಣಿಸಬಹುದು. 8,54,000 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ..

0

Leave a Reply

Your email address will not be published. Required fields are marked *