ಹೈಕೋರ್ಟ್ ಮೆಟ್ಟಿಲೇರಿದ ಡಿಎಂಕೆ ಕಾರ್ಯಾಧ್ಯಕ್ಷ ಸ್ಟಾಲಿನ್

ಚೆನ್ನೈ: ತಮಿಳುನಾಡಿನಲ್ಲಿ ಮುಂದುವರೆದಿರುವ ರಾಜಕೀಯ ಬಿಕ್ಕಟ್ಟಿನ ನಡುವೆ ಡಿಎಂಕೆ ಕಾರ್ಯಾಧ್ಯಕ್ಷ ಎಂ ಕೆ ಸ್ಟಾಲಿನ್ ಕೋರ್ಟ್ ಮೆಟ್ಟಿಲೇರಿದ್ದಾರೆ. ರಾಜ್ಯಪಾಲ ಸಿ ವಿದ್ಯಾಸಾಗರ್ ರಾವ್, ಸಿಎಂ ಪಳನಿಸ್ವಾಮಿಯವರಿಗೆ ಸದನದಲ್ಲಿ ಬಹುಮತ ಸಾಬೀತುಪಡಿಸಲು ಸೂಚಿಸದೇ ಇರುವ ನಿರ್ಧಾರವನ್ನು ಅವರು ಮದ್ರಾಸ್ ಹೈಕೋರ್ಟ್​​ನಲ್ಲಿ ಪ್ರಶ್ನಿಸಿದ್ದಾರೆ. ಬಹುಮತ ಸಾಬೀತಿಗೆ ಸೂಚನೆ ನೀಡದೇ ಇದ್ದಲ್ಲಿ ಕೋರ್ಟ್ ಮೆಟ್ಟಿಲೇರುವುದಾಗಿ ಈ ಹಿಂದೆಯೇ ತಿಳಿಸಿದ್ದೆ. ಆದರೆ, ರಾಜ್ಯಪಾಲರು ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಕೋರ್ಟ್ ಮೆಟ್ಟಿಲೇರಿದ್ದೇನೆ ಎಂದು ಸ್ಟಾಲಿನ್ ತಿಳಿಸಿದರು.

ನಿನ್ನೆ ರಾಜ್ಯಪಾಲರನ್ನು ಭೇಟಿಯಾಗಿದ್ದ ಸ್ಟಾಲಿನ್, ಪಳನಿಸ್ವಾಮಿಯವರು ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ಸೂಚಿಸಿ ಎಂದು ಮನವಿ ಸಲ್ಲಿಸಿದ್ದರು. ಕಾಂಗ್ರೆಸ್ ಶಾಸಕರು ಕೂಡ ಪ್ರತ್ಯೇಕವಾಗಿ ರಾಜ್ಯಪಾಲರನ್ನು ಭೇಟಿ ಮಾಡಿ ಈ ಕುರಿತು ಮಾತುಕತೆ ನಡೆಸಿದ್ದರು.

0

Leave a Reply

Your email address will not be published. Required fields are marked *