ಸಿದ್ದರಾಮಯ್ಯ – ಸದಾನಂದಗೌಡ ನಡುವೆ ಟ್ವೀಟ್ ವಾರ್​​​

ಬೆಂಗಳೂರು: ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ಡಿ.ವಿ.ಸದಾನಂದ ಗೌಡ ಅವರ ನಡುವೆ ಕಳೆದ ಎರಡು ದಿನಗಳಿಂದ ಟ್ವೀಟ್ ವಾರ್ ನಡೆಯುತ್ತಿದೆ. ಇದರ ಝಲಕ್ ಇಲ್ಲಿದೆ. ಇದೇ ನವಂಬರ್ 16ರಂದು ಸಿದ್ದರಾಮಯ್ಯ ಬಿಜೆಪಿಯ ಅಜೆಂಡಾ ಮತ್ತು ಅವುಗಳ ವೈಫಲ್ಯ ಕುರಿತು, ಕರ್ನಾಟಕದ ಕರಾವಳಿಯನ್ನು ಬಿಜೆಪಿ ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದೆ, ಹಾಗಾಗಿ ಬಿಜೆಪಿ ರಾಷ್ಟ್ರೀಯ ನಾಯಕರು ಆಗಾಗ ಕರಾವಳಿಗೆ ಭೇಟಿ ನೀಡುತ್ತಾರೆ ಎಂದು ಆರೋಪಿಸಿದ್ದರು. ಅಲ್ಲದೇ, ಅಮಿತ್ ಶಾ ಮತ್ತು ನರೇಂದ್ರ ಮೋದಿ ಕರ್ನಾಟಕದಲ್ಲಿಯೇ ಬಂದು ಮನೆ ಮಾಡಿದ್ರೂ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ರಾಜ್ಯದ ಜನ ಬೆಂಬಲ ನೀಡುವುದಿಲ್ಲ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.

ಈ ಟ್ವೀಟ್​ಗೆ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿದ್ದ ಕೇಂದ್ರ ಸಚಿವ ಸದಾನಂದ ಗೌಡ, ಅದೇ ರಿಕಾರ್ಡ್ ಕಂಠ ಪಾಠ ಮಾಡಿಕೊಂಡು ಎಷ್ಟು ದಿನ ಸುತ್ತಬೇಕು ಅಂತ ಇದ್ದೀರಾ? ಎಂದು ಪ್ರಶ್ನಿಸಿದ್ದರು. ಜೊತೆಗೆ, ಚಾಮುಂಡೇಶ್ವರಿಯ ಮತದಾರರೇ ನಿಮ್ಮನ್ನು ನಂಬಲಿಲ್ಲ. ಇನ್ನು ಕರಾವಳಿಯ ಜನ ನಿಮ್ಮ ಕಂಠ ಪಾಠ ಒಪ್ತಾರಾ ? ಕರಾವಳಿಯ ಯಾಕೆ ಇಡೀ ಕರ್ನಾಟಕದ ಜನರಿಗೆ ತಮ್ಮ ಆಯ್ಕೆ ಗೊತ್ತಿದೆ. ಇನ್ನು ಅಧಿಕಾರ ಹೊಂದಾಣಿಕೆ ನಿಮ್ಮ ಬಹುಮತಕ್ಕೆ ಬಂದದ್ದಲ್ಲ ನೆನಪಿರಲಿ ಎಂದು ಕಾಲೆಳೆದಿದ್ದರು.

ಇದಕ್ಕೆ ಸಿದ್ದರಾಮಯ್ಯ ಟ್ವೀಟ್ ಮೂಲಕವೇ ಪ್ರತ್ಯುತ್ತರ ನೀಡಿದ್ದು, ಶ್ರೀ ಸದಾನಂದಗೌಡರೇ “ಕರಾವಳಿಯ ಯಾಕೆ ಇಡೀ ಕರ್ನಾಟಕದ ಜನರಿಗೆ ತಮ್ಮ ಆಯ್ಕೆ ಗೊತ್ತಿದೆ” ಎಂದು ಕರೆಕ್ಟಾಗಿ ಹೇಳಿದ್ದೀರಿ. ನೀವು ಉಡುಪಿ -ಪುತ್ತೂರು ಬಿಟ್ಟು ಬೆಂಗಳೂರಿಗೆ ಬಂದು ಸೇರಿಕೊಂಡಿದ್ದು ಕರಾವಳಿಯವರಿಗೆ ಖಂಡಿತ ಗೊತ್ತಿದೆ. ಜೆಡಿ(ಎಸ್) ಜತೆ ಸೇರ್ಕೊಂಡು ಸರ್ಕಾರ ರಚನೆ ಮಾಡಿದಾಗ ನಿಮ್ಮ‌ ಪಕ್ಷಕ್ಕೆ ಬಹುಮತ ಇತ್ತಾ ಗೌಡ್ರೆ? ಎಂದು ಪ್ರಶ್ನಿಸಿದ್ದಾರೆ.

0

Leave a Reply

Your email address will not be published. Required fields are marked *