ಉಡುಪಿಯ ಶಿರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀ ನಿಧನ ಹಿನ್ನೆಲೆ ಸಂಜೆಯೊಳಗೆ ಉತ್ತರಾಧಿಕಾರಿ ನೇಮಕ

ಉಡುಪಿಯ ಶಿರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಗಳು ವಿಧಿವಶರಾಗಿದ್ದಾರೆ. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಶ್ರೀಗಳು ಬೆಳಗಿನ ಜಾವ ಉಡುಪಿಯ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಿನ್ನೆ ನಿರ್ಜಲೀಕರಣ ಸಮಸ್ಯೆಯಿಂದ ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿದ್ದರು ಆದ್ರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಶ್ರೀಗಳ ಅಕಾಲಿಕ ಮರಣದಿಂದಾಗಿ ಇಡೀ ಮಠದಲ್ಲಿ ನೀರವಮೌನ ಆವರಿಸಿದೆ. ಮಾಜಿ ಪ್ರಧಾನಿ ಹೆಚ್​ದೇವೇಗೌಡ ಅವರು ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇನ್ನು ಉಡುಪಿ ಮಠದ ಸಂಪ್ರದಾಯದಂತೆ ಶ್ರೀಗಳ ಶರೀರವನ್ನು ಮಠಕ್ಕೆ ಕೊಂಡೊಯ್ದು ದೇವರ ದರ್ಶನ ಮಾಡಿಸಲಾಗುತ್ತದೆ. ಬಳಿಕ ಅವರ ಪೂಜಾ ಸಾಮಾಗ್ರಿಗಳನ್ನು ಅವರ ಶರೀರದ ಜೊತೆ ಇರಿಸಿ ಬೃಂದಾವನ ನಿರ್ಮಿಸಿ ಅದರಲ್ಲಿ ಉಪ್ಪು ಹತ್ತಿ ಕಾಳುಮೆಣಸು ಕರ್ಪೂರಗಳನ್ನು ತುಂಬಿಸಿ ಸಮಾಧಿ ಮಾಡಲಾಗುತ್ತದೆ.

ಇನ್ನು ಶ್ರೀಗಳ ಸಾವಿನಿಂದ ಉಡುಪಿಯ ಅಷ್ಟಮಠಗಳಲ್ಲೊಂದಾದ ಶೀರೂರು ಮಠದ ಉತ್ತರಧಿಕಾರಿ ಯಾರು ಎಂಬುದು ಪ್ರಶ್ನೆಯಾಗಿದೆ. ಲಕ್ಷ್ಮೀವರ ತೀರ್ಥ ಶ್ರೀಗಳು ತಮ್ಮ 8ನೇ ವಯಸ್ಸಿಗೆ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದರು. ಇನ್ನು ಕಳೆದ ವಿಧಾನಸಭಾ ಚುನಾವಣಾ ವೇಳೆ ಚುನಾವಣೆಗೆ ನಿಲ್ಲುವುದಾಗಿ ಹೇಳಿದ್ರು. ಆದ್ರೆ ಕೊನೆ ಘಳಿಗೆಯಲ್ಲಿ ಚುನಾವಣೆಯಿಂದ ಹಿಂದೆ ಸರಿದಿದ್ದರು. ಇನ್ನು ಮಧ್ಯಾಹ್ನದ ವೇಳೆಗೆ ಉಡುಪಿಯ ರಥಬೀದಿಯಲ್ಲಿ ಮೆರವಣಿಗೆ ಮಾಡಿ ತದ ನಂತರ ಅಂತ್ಯ ಸಂಸ್ಕಾರ ಸಿದ್ದತೆ ಮಾಡಿಕೊಳ್ಳಲಾಗುವುದು ಎಂದು ಮಠದಿಂದ ತಿಳಿಸಿದ್ದಾರೆ.

0

Leave a Reply

Your email address will not be published. Required fields are marked *