ಕಾಶ್ಮೀರ ಸ್ಥಳೀಯ ಸಂಸ್ಥೆಗಳಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ

ಜಮ್ಮು ಕಾಶ್ಮೀರದ ಸ್ಥಳೀಯ ಸಂಸ್ಥೆಗಳಿಗೆ 9 ಹಂತದಲ್ಲಿ ಚುನಾವಣೆ
ನವೆಂಬರ್ 17, 20, 24, 27, 29, ಡಿಸೆಂಬರ್ 1, 4, 8
11ರಂದು ಚುನಾವಣೆ ನಡೆಯಲಿದೆ ಎಂದ ಆಯೋಗ
ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ
ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲಾಗುವುದು
ಕಾಶ್ಮೀರ ಮುಖ್ಯ ಚುನಾವಣಾಧಿಕಾರಿ ಶಲೀನ್ ಕಬ್ರಾ ಹೇಳಿಕೆ

ಶ್ರೀನಗರ: ಜಮ್ಮು ಕಾಶ್ಮೀರದ ಸ್ಥಳೀಯ ಸಂಸ್ಥೆಗಳಿಗೆ 9 ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 17, 20, 24, 27, 29, ಡಿಸೆಂಬರ್ 1, 4, 8 ಮತ್ತು 11ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ದಿನಾಂಕವನ್ನು ಘೋಷಿಸಿದೆ. ವಿಚಿತ್ರ ಸಂಗತಿ ಎಂದರೆ, ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲಾಗುವುದು ಎಂದು ಜಮ್ಮು ಕಾಶ್ಮೀರ ಮುಖ್ಯ ಚುನಾವಣಾಧಿಕಾರಿ ಶಲೀನ್ ಕಬ್ರಾ ಹೇಳಿದ್ದಾರೆ.

ದೇಶಾದ್ಯಂತ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಿ ಎಂದು ವಿಪಕ್ಷಗಳು ಒತ್ತಾಯಿಸಿದರೆ, ಇವಿಎಂಗಳ ಮೂಲಕವೇ ಚುನಾವಣೆ ನಡೆಸಬೇಕು ಎಂದು ಬಿಜೆಪಿ ಹೇಳಿತ್ತು. ಚುನಾವಣಾ ಆಯೋಗ ಕೂಡ ಇದೇ ನಿಲುವನ್ನು ವ್ಯಕ್ತಪಡಿಸಿತ್ತು. ಆದರೆ, ಜಮ್ಮು ಕಾಶ್ಮೀರದ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ಮೂಲಕ ನಡೆಸುತ್ತಿರುವುದು ಏಕೆ? ಎಂಬ ಪ್ರಶ್ನೆ ಎದುರಾಗಿದೆ.

ಇನ್ನು ಪ್ರಮುಖ ಪಕ್ಷಗಳಾದ ಪಿಡಿಪಿ ಮತ್ತು ನ್ಯಾಷನಲ್ ಕಾನ್ಫರೆನ್ಸ್​​ಗಳು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬಹಿಷ್ಕರಿಸಿವೆ. ಸಂವಿಧಾನದ 35(ಎ) ಪರಿಚ್ಛೇದ ಕುರಿತು ಕೇಂದ್ರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿ ಎರಡೂ ಪಕ್ಷಗಳು ಚುನಾವಣೆ ಪ್ರಕ್ರಿಯೆಯಿಂದ ದೂರ ಉಳಿಯುವುದಾಗಿ ಘೋಷಿಸಿವೆ. ಆದರೆ, ಕಾಂಗ್ರೆಸ್ ಈ ಕುರಿತು ಇನ್ನೂ ಯಾವುದೇ ನಿರ್ಧಾರವನ್ನು ಪ್ರಕಟಿಸಿಲ್ಲ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಶ್ಮೀರ ಚುನಾವಣೆ ಕುತೂಹಲ ಕೆರಳಿಸಿದೆ.

0

Leave a Reply

Your email address will not be published. Required fields are marked *