ಕಾವೇರಿ ನೀರು ನಿರ್ವಹಣ ಮಂಡಳಿ ರಚನೆ: ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಸ್ಟಾಲಿನ್

ಚೆನ್ನೈ: ಕಾವೇರಿ ನೀರು ನಿರ್ವಹಣಾ ಮಂಡಳಿ ವಿಚಾರಕ್ಕೆ ಸಂಬಂಧಿಸಿದಂತೆ ಚೆನ್ನೈನ ಡಿಎಂಕೆ ಮುಖ್ಯ ಕಚೇರಿಯಲ್ಲಿ ಸರ್ವಪಕ್ಷ ಸಭೆ ನಡೆಯಿತು. ಕೇಂದ್ರ ಮತ್ತು ಸುಪ್ರೀಂ ಕೋರ್ಟ್​​​​ ನಿರ್ಧಾರದ ಕುರಿತು ಸಭೆಯಲ್ಲಿ ಸರ್ವಪಕ್ಷ ಮುಖಂಡರು ಚರ್ಚಿಸಿದರು. ಸಭೆ ನಂತರ ಸುದ್ದಿ ಗೋಷ್ಠಿ ನಡೆಸಿದ ಡಿಎಂಕೆ ಕಾರ್ಯಾಧ್ಯಕ್ಷ ಸ್ಟಾಲಿನ್, ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದರು. ಅಲ್ಲದೇ, ಅಧಿಕಾರ ಬಳಸಿ ಮಂಡಳಿ ರಚಿಸಬಹುದಿತ್ತು ಎಂದರು. ಇದರೊಂದಿಗೆ ತೂತ್ತುಕುಡಿಯಲ್ಲಿ ಪೊಲೀಸರ ದೌರ್ಜನ್ಯವನ್ನೂ ಖಂಡಿಸಿದರು.

0

Leave a Reply

Your email address will not be published. Required fields are marked *