ಇಂದಿನಿಂದ ಚಳಿಗಾಲದ ಅಧಿವೇಶನ

ಕುಂದಾನಗರಿ ಬೆಳಗಾವಿಯಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ವಿಧಾನಸಭೆ ಚುನಾವಣೆಯ ಹತ್ತಿರದಲ್ಲಿರುವಾಗಲೇ, ಚಳಿಗಾಲದ ಅಧಿವೇಶನ ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಗೆ ಸಾಕ್ಷಿಯಾಗಲಿದೆ‌. ಇಂದಿನಿಂದ ನವೆಂಬರ್ 24ರವರೆಗೆ ಒಟ್ಟು 10 ದಿನಗಳ ಕಾಲ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯಲಿದೆ. ಹಲವು ಮಹತ್ವದ ವಿಚಾರಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ. ಹಲವು ಮಹತ್ವದ ವಿಧೇಯಕಗಳು ಕೂಡಾ ಮಂಡನೆಯಾಗಲಿವೆ. ಆಡಳಿತ ಪಕ್ಷ ಕಾಂಗ್ರೆಸ್ ಹಣೆಯಲು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯತಂತ್ರ ರೂಪಿಸಿದ್ರೆ, ಪ್ರತಿಪಕ್ಷಗಳಿಗೆ ಉತ್ತರ ನೀಡಲು ಸರ್ಕಾರ ಕೂಡ ಸಜ್ಜಾಗಿದೆ. ಇನ್ನು ಅಧಿವೇಶನದಲ್ಲಿ ಮಹತ್ವದ ವಿಧೇಯಕಗಳು ಮಂಡನೆಯಾಗಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗಲಿವೆ. ಅಧಿವೇಶನ ಹಿನ್ನೆಲೆ ಸುವರ್ಣಸೌಧದ ಸುತ್ತಮುತ್ತ ಬಿಗಿಬಂದೋಬಸ್ತ್ ಕೈಗೊಳ್ಳಲಾಗಿದೆ.

0

Leave a Reply

Your email address will not be published. Required fields are marked *