ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ: ಮಾಯಾವತಿ

ಬಿಸ್ಲಾಪುರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿಕೂಟ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವಂತೆ ಪೂರ್ಣಪ್ರಮಾಣದಲ್ಲಿ ಪ್ರಯತ್ನ ಪಡಬೇಕು ಎಂದು ಬಿಎಸ್​ಪಿ ನಾಯಕಿ ಮಾಯಾವತಿ ಹೇಳಿದರು. ಛತ್ತೀಸ್​ಗಡದ ಬಿಸ್ಲಾಪುರದಲ್ಲಿ ನಡೆದ ಬಹಿರಂಗ ಚುನಾವಣಾ ಪ್ರಚಾರ ಭಾಷಣದಲ್ಲಿ ಮಾತನಾಡಿದ ಅವರು, ಚುನಾವಣೆ ಸಮೀಪ ಬರುತ್ತಿರುವ ಸಂದರ್ಭದಲ್ಲಿ ರಾಮ ಮಂದಿರ ನಿರ್ಮಾಣ ವಿಚಾರವನ್ನು ಹೆಚ್ಚಾಗಿ ಬಳಸಲಾಗುತ್ತಿದೆ. ಈ ವಿಷಯದಲ್ಲಿ ಈಗ ಬಿಜೆಪಿಗರು ಉತ್ತರಪ್ರದೇಶದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲೇ ರಾಮಂದಿರ ನಿರ್ಮಿಸಲಿ. ಆದರೆ, ಇದರಿಂದ ಬಿಜೆಪಿ ಮತ್ತು ಆರ್​ಎಸ್​ಎಸ್​​ಗೆ ರಾಜಕೀಯ ಲಾಭವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು. ಜೊತೆಗೆ, ಕಾಂಗ್ರೆಸ್ ಪಕ್ಷದಲ್ಲಿ ಸಿಗದಂತಹ ಸಹಕಾರ ಬಿಎಸ್​​ಪಿಯಲ್ಲಿ ಜನತಾ ಕಾಂಗ್ರೆಸ್​​ ನಾಯಕ ಅಜಿತ್ ಜೋಗಿಯವರಿಗೆ ಸಿಗಲಿದೆ ಎಂದು ನಾನು ಭರವಸೆ ನೀಡುತ್ತೇನೆ ಎಂದರು.

0

Leave a Reply

Your email address will not be published. Required fields are marked *