ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಹೊಸ ಸಮನ್ಸ್

ಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಹೊಸದಾಗಿ ಸಮನ್ಸ್ ಜಾರಿ ಮಾಡಿದೆ.

ಕೇಜ್ರಿವಾಲ್ ಅವರನ್ನು ಕೇಂದ್ರ ದೆಹಲಿಯಲ್ಲಿರುವ ಕೇಂದ್ರೀಯ ಸಂಸ್ಥೆಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೇಳಲಾಗಿದೆ.

ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಜಾರಿ ಮಾಡಿರುವ ಒಂಬತ್ತನೇ ಸಮನ್ಸ್ ಇದಾಗಿದೆ, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

Author

error: