ಕೇಂದ್ರ ಗೃಹ ಸಚಿವ ಅಮಿತ್ ಶಾ ಇವತ್ತು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಚೆನ್ನಪಟ್ಟಣದಲ್ಲಿ ರೋಡ್ ಶೋ ನಡೆಸಿದರು. ಅವರ ಜೊತೆ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಇದ್ದರು.
ಬಿಜೆಪಿ ರಾಜ್ಯ ಘಟಕದ್ ಅಧ್ಯಕ್ಷ ವಿಜಯೇಂದ್ರ ಕೂಡ ಪಾಲ್ಗೊಂಡಿದ್ದರು
ಕುಟುಂಬ ರಾಜಕಾರಣವನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತ
ಸುಮಾರು ಒಂದು ಕೀಮಿ ದೂರದ ಈ ರೋಡ್ ಶೋ ದಲ್ಲಿ ಸಾವಿರಾರು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಆದರೆ ಮಾಧ್ಯಮಗಳು ಹೇಳಿದ ಹಾಗೆ ಭಾರಿ ಸಂಖ್ಯೆಯಲ್ಲಿ ಜನರು ಸೇರಿರಲಿಲ್ಲ. ಕುಮಾರಸ್ವಾಮಿ ಅವರು ಪ್ರತಿನಿಧಿಸುವ ಕ್ಷೇತ್ರವಾದ್ದರಿಂದ ಸಾಕಷ್ಟು ಸಂಖ್ಯೆಯಲ್ಲಿ ಜನ ಸೇರಿದ್ದು ನಿಜ.
ಈ ರೋಡ್ ಶೋ ದಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರು ಬಿಜೆಪಿ ಮತ್ತು ಜೆಡಿಎಸ್ ಧ್ವಜಗಳನ್ನು ಹಿಡಿದಿದ್ದರು. ಆದರೆ ಕುಮಾರಸ್ವಾಮಿ ಅವರು ಪ್ರತಿನಿಧಿಸುವ ಚನ್ನಪಟ್ಟಣದಲ್ಲಿ ಜೆಡಿಎಸ್ ಧ್ವಜಕ್ಕಿಂತ ಬಿಜೆಪಿ ಧ್ವಜವೇ ಹೆಚ್ಚಾಗಿತ್ತು. ಕೆಲವು ಕಾರ್ಯಕರ್ತರು ಬಿಜೆಪಿ ಮತ್ತು ಜೆಡಿಎಸ್ ಎರದೂ ಪಕ್ಷದ ಶಾಲುಗಳನ್ನು ಹಾಕಿಕೊಂಡಿದ್ದರು.
ಜೊತೆಗೆ ಜೈ ಶ್ರೀರಾಮ ಘೋಷಣೆ ಮೊಳಗುತ್ತಿತ್ತು. ಬಿಜೆಪಿ ಪ್ರಬಲವಾಗಿಲ್ಲದ ಬ್ದೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಜೆಪಿ ಪ್ರಬಲವಾಗಲು ಈ ರೋಡ್ ಶೋ ಸಹಾಯ ಮಾಡಬಹುದು ಎಂದು ನಿರೀಕ್ಷಿಸಲಾಗಿದೆ. ಹಾಗೇನಾದರೂ ಆದರೆ ಅದರ ಕೀರ್ತಿ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ.

Author

Leave a Reply

Your email address will not be published. Required fields are marked *