ರಾಸಲೀಲೆ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸುವ ಬಗ್ಗೆ ಜೆಡಿಎಸ್ ವರಿಷ್ಟರು ಚಿಂತನೆ ನಡೆಸಿದ್ದಾರೆ. ನಾಳೆ ನಡೆಯಲಿರುವ ಪಕ್ಷದ ಉನ್ನತ ಮಟ್ತದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಮಾಜಿ ಪ್ರಧಾನಿ ದೇವೇಗೌಡರು ತಮ್ಮ ನಿರ್ಧಾರವನ್ನು ಇನ್ನೂ ಪ್ರಕಟಿಸಬೇಕಾಗಿದೆ.

ಈ ಮೂಲಕ ಪಕ್ಷಕ್ಕೆ ಆಗಿರುವ ಹಾನಿಯನ್ನು ಸರಿಪಡಿಸುವ ಯತ್ನವನ್ನು ಪಕ್ಶ ನಡೆಸಲಿದೆ.
ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಶಿವಮೊಗ್ಗದಲ್ಲಿ ಹೇಳಿದ್ದಾರೆ. ಆದರೆ ಪಕ್ಷದಿಂದ ಈ ಬಗ್ಗೆ ಯಾವುದೇ ಪ್ರಕಟಣೆ ಬಂದಿಲ್ಲ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣನನ್ನು ಉಚ್ಛಾಟನೆ ಮಾಡಲಾಗಿದೆ, ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು, ಯಾರು, ಯಾವಾಗ ಎಲ್ಲಿಗೆ ಹೋಗುತ್ತಾರೆ ಎಂದು ಕಾದು ಕೊಂಡಿ ಕುಳಿತುಕೊಳ್ಳಲಾಗುತ್ತಾ ಎಂದು ಪ್ರಶ್ನಿಸಿದರು.

. ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪ ಕೇಳಿಬಂದು, ಹಾಸನದಲ್ಲಿ ರಾಶಿ ರಾಶಿ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್ ಹಾದಿ ಬೀದಿಯಲ್ಲಿ ಸಿಕ್ಕಿದ್ದವು. ಈ ವಿಚಾರಕ್ಕೆ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿ ಆಗಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೂ ಮುಜುಗರ ಉಂಟಾಗಿತ್ತು. ಅಲ್ಲದೆ, ಸ್ವತಃ ಜೆಡಿಎಸ್ ಶಾಸಕರೇ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರಜ್ವಲ್ ರೇವಣ್ಣನ ಜೆಡಿಎಸ್ ಪಕ್ಷದಿಂದಲೇ ಉಚ್ಛಾಟನೆ ಮಾಡಬೇಕು ಎಂದು ಬಂಡಾಯ ಎದ್ದಿದ್ದರು.

Author

Leave a Reply

Your email address will not be published. Required fields are marked *