ವಾಷಿಂಗ್ಟನ್ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಕುರಿತಂತೆ ಅಮೇರಿಕ ತೀಕ್ಷ ಪ್ರತಿಕ್ರಿಯೆ ನೀಡಿದೆ. ಕಾನೂನು ಪ್ರಕ್ರಿಯೆ ಮುಕ್ತವಾಗಿ ಮತ್ತು ನ್ಯಾಯ ಸಮ್ಮತವಾಗಿ ನಡೆಯುವಂತೆ ನೋಡಿಕೊಳ್ಳಿ ಎಂದು ಅದು ಭಾರತಕ್ಕೆ ಸೂಚಿಸಿದೆ.

ಈ ಬಂಧನಕ್ಕೆ ಸಂಬಂಧಿಸಿದಂತೆ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅಮೇರಿಕ ವಿದೇಶಾಂಗ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.

ಈಗಾಗಲೇ ಹಲವು ಐರೋಪ್ಯ ರಾಷ್ಟ್ರಗಳು ಕೇಜ್ರಿವಾಲ್ ಬಂಧನದ ಕುರಿತು ಆತಂಕವನ್ನು ವ್ಯಕ್ತಪಡಿಸಿವೆ.
ಜರ್ಮನಿ ಈ ಕುರಿತು ತೀಕ್ಷ್ಣ ಪ್ರತಿಕ್ರಿಯೆ ನೀಡಿತ್ತು. ಇದಕ್ಕೆ ಭಾರತದ ವಿದೇಶಾಂಗ ಇಲಾಖೆ ಕೂಡ ಪ್ರತಿಕ್ರಿಯಿಸಿತ್ತು, ಕೇಜ್ರಿವಾಲ್ ಬಂಧನ, ಕಾನೂನು ಪ್ರಕ್ರೊಯೆ ಮುಕ್ತವಾಗಿ ಮತ್ತು ನ್ಯಾಯಸಮ್ಮತವಾಗಿ ನಡೆಯುವಂತೆ ನೋಡಿಕೊಳ್ಳಿ ಎಂದು ಭಾರತಕ್ಕೆ ಅಮೇರಿಕ ಸೂಚನೆ ನೀಡಿದೆ.

Author

Leave a Reply

Your email address will not be published. Required fields are marked *