ನವದೆಹಲಿ : ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟು ಸಂಸದೆ ಸುಮಲತಾ ಅವರನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿದೆ.
ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸುಳಿವು ನೀಡಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮಾರ್ಚ್ 22ರಂದು ನಡೆಯಲಿರುವ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು
ಈ ಬಗ್ಗೆ ಬಿಜೆಪಿ ನಾಯಕರ ಜೊತೆಗೆ ಒಂದು ಸುತ್ತಿನ ಚರ್ಚೆ ಆಗಿದೆ. ಮಾರ್ಚ್ 22ರಂದು ಪ್ರಧಾನಿ ಮೋದಿ ಜೊತೆಗೆ ಸಭೆ ಇದ್ದು ಅಂದೇ ಈ ಬಗ್ಗೆ ಅಂತಿಮ ನಿರ್ಧಾರ ಆಗಲಿದೆ ಎಂದು ವಿಜಯೇಂದ್ರ ತಿಳಿಸಿದರು.







