ನವದೆಹಲಿ : ಸಿಇಸಿ ಮತ್ತು ಇಸಿಗಳನ್ನು ನೇಮಕ ಮಾಡುವ ಆಯ್ಕೆ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಅವರನ್ನು ಕೈಬಿಟ್ಟಿರುವ ಕಾನೂನನ್ನು ಕೇಂದ್ರ ಸರ್ಕಾರ ಬಲವಾಗಿ ಸಮರ್ಥಿಸಿಕೊಂಡಿದೆ.
ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ಕಾಯಿದೆ 2023 ಈ ಸಂಬಂಧ ಅಫಿಡವಿಟ್ ಅನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ.
ಈ ಕಾನೂನನ್ನು ನಿಷೇಧಿಸುವಂತೆ ಆಗ್ರಹಿಸಿ ಸಲ್ಲಿಸಿರುವ ಅರ್ಜಿಗಳ ಕುರಿತು ಕೇಂದ್ರ ಸರ್ಕಾರವು ಕಾನೂನಿನ ವಿರುದ್ಧ ಸಲ್ಲಿಸಿರುವ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದೆ. ಸರ್ಕಾರವು ಸಂಸತ್ತಿನಲ್ಲಿ ಮಸೂದೆಯನ್ನು ಅಂಗೀಕರಿಸಿದ್ದು ಭಾರತದ ಮುಖ್ಯ ನ್ಯಾಯಮೂರ್ತಿಯನ್ನು ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ದೂರವಿಟ್ಟು ಕಾನೂನು ಮಾಡಿದೆ ಎಂಬುದು ಗಮನಾರ್ಹ. ಇದರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು.
ಅಫಿಡವಿಟ್‌ನಲ್ಲಿ ಕೇಂದ್ರ ಸರ್ಕಾರವು ಕಾನೂನುಗಳಿಗೆ ತಡೆ ಕೋರಿ ಸಲ್ಲಿಸಿದ ಅರ್ಜಿಗಳನ್ನು ವಿರೋಧಿಸಿದೆ. ಚುನಾವಣಾ ಆಯೋಗ, ಇತರ ಯಾವುದೇ ಸಂಸ್ಥೆ ಅಥವಾ ಪ್ರಾಧಿಕಾರದ ಸ್ವಾತಂತ್ರ್ಯವನ್ನು ಕೇವಲ ಆಯ್ಕೆ ಸಮಿತಿಯಲ್ಲಿ ನ್ಯಾಯಾಂಗ ಸದಸ್ಯರ ಉಪಸ್ಥಿತಿಯಿಂದ ಖಚಿತಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿದೆ.
