ಬಿಜೆಪಿ ಜೆಡಿಎಸ್ ಮೈತ್ರಿಯ ನಡುವೆ ಸಮಸ್ಯೆ ಉಂಟಾಗುತ್ತಿದ್ದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ.
ಅಂತಹ ಸಮಸ್ಯೆ ಏನೂ ಇಲ್ಲ. ಸಣ್ನ ಪುಟ್ಟ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.
ಎರಡೂ ಪಕ್ಷಗಳ ನಾಯಕರು ನಿನ್ನೆ ಮಾತನಾಡಿದ್ದಾರೆ. ಸಮಸ್ಯೆ ಬಗೆ ಹರಿಯುತ್ತದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.







