ಪ್ರಜ್ವಲ್ ವಿದೇಶಕ್ಕೆ ಕಳುಹಿಸಿದ ಹಿಂದಿನ ತಲೆ ಯಾರದು ?
ಸೂರಜ್ ರೇವಣ್ಣ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು ಯಾಕೆ ?
ರೇವಣ್ಣ ಕುಟುಂಬದಲ್ಲೂ ವೈಮನಸ್ಸು ?
ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್​​ ರೇವಣ್ಣರನ್ನು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರೇ ಪ್ಲಾನ್ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆಯೆ ?

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಕಾರ ಈ ಪ್ರಶ್ನೆಗೆ ಉತ್ತರ ಹೌದು.
ಸೂರಜ್ ರೇವಣ್ಣ ಜೊತೆ ಫೋಟೋ ಇದ್ದರೆ ಏನಾಗುತ್ತೆ ಕುಮಾರಸ್ವಾಮಿ ಜೊತೆಗೂ ಡಿಕೆ ಶಿವಕುಮಾರ್ ಫೋಟೋ ಇದೆ. ನನ್ನ ಜೊತೆಗೆ ಹೆಚ್​ಡಿ ರೇವಣ್ಣ ಇರುವ ಫೋಟೋ ಕೂಡ ಇದೆ. ಹಾಗಾದ್ರೆ ಅವರನ್ನು ರಕ್ಷಣೆ ಮಾಡುತ್ತೇನೆ ಎಂದು ಅರ್ಥವಾ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಪ್ರಶ್ನಿಸಿದರು.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್​ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಿದೇಶಕ್ಕೆ ಹೋಗುವವರಿಗೆ ವೀಸಾ ಕೊಡುವುದು ಯಾರು ಕೇಂದ್ರದ ಬಿಜೆಪಿಯವರೇ ತಾನೇ ಎಂದರು, ಪ್ರಜ್ವಲ್ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್​ಗೂ ಯಾವುದೇ ಸಂಬಂಧ ಇಲ್ಲ ಎಂದರು..

ಪೆನ್​ಡ್ರೈವ್ ಹಿಂದೆ ಡಿಕೆ ಶಿವಕುಮಾರ್ ಕೈವಾಡ ಇದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕಾರ್ತಿಕ್ ಎಂಬಾತ ಪ್ರಜ್ವಲ್ ರೇವಣ್ಣರ ಕಾರು ಚಾಲಕ ಆಗಿದ್ದ. ಕಾರ್ತಿಕ್ ಬಿಜೆಪಿ ಮುಖಂಡನ ಕೈಯಲ್ಲಿ ಪೆನ್​ಡ್ರೈವ್ ಕೊಟ್ಟಿದ್ದ. ಅದನ್ನು ಆತನೇ ಹೇಳಿಕೊಂಡಿದ್ದಾನೆ. ಹೆಚ್​​ಡಿಕೆ ಕೇವಲ ರಾಜಕಾರಣಕ್ಕಾಗಿ ಡಿಕೆ ಶಿವಕುಮಾರ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.
ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎಲ್ಲ ವಿಚಾರ ಗೊತ್ತಿದ್ದರೂ ಯಾಕೆ ಪ್ರಜ್ವಲ್​ಗೆ ಟಿಕೆಟ್​ ಕೊಟ್ಟರು, ಪ್ರಕರಣದ ತನಿಖೆಗೆ ಎಸ್​​ಐಟಿ ರಚನೆ ಮಾಡಲಾಗಿದೆ. ಎಸ್​ಐಟಿ ಅಧಿಕಾರಿಗಳು ಪಾರದರ್ಶಕವಾಗಿ ತನಿಖೆ ಮಾಡುತ್ತಾರೆ. ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದರು.

Author

Leave a Reply

Your email address will not be published. Required fields are marked *