ಸದಾನಂದಗೌಡರನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳಲು ಆಪರೇಶನ್ ಮಾಡಲಾಗುತ್ತಿದೆ ಎಂಬ ಚರ್ಚೆ ಬಗ್ಗೆ ಕೇಳಿದಾಗ, “ಒಂದು ಪಕ್ಷದಲ್ಲಿ ಟಿಕೆಟ್ ವಂಚಿತರಾದವರು ಬೇರೆ ಪಕ್ಷಗಳಿಂದ ಸ್ಪರ್ಧೆ ಮಾಡುವುದು ರಾಜಕೀಯದಲ್ಲಿ ಸಹಜ. ಆಯನೂರು ಮಂಜುನಾಥ್ ಅವರಿಗೆ ಬಿಜೆಪಿ ಟಿಕೆಟ್ ಸಿಗದಿದ್ದಾಗ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಮೂಡಿಗೆರೆಯಲ್ಲಿ ಎಂಪಿ ಕುಮಾರಸ್ವಾಮಿಗೆ ಟಿಕೆಟ್ ಸಿಗದಿದ್ದಾಗ ಜೆಡಿಎಸ್ ನಿಂದ ಸ್ಪರ್ಧೆ ಮಾಡಿದ್ದರು. ನಮ್ಮಲ್ಲಿ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಟಿಕೆಟ್ ನೀಡದಿದ್ದಾಗ ಜೆಡಿಎಸ್ ನಿಂದ ಸ್ಪರ್ಧೆ ಮಾಡಿದ್ದರು. ಶೆಟ್ಟರ್, ಸವದಿಗೆ ಬಿಜೆಪಿಯಲ್ಲಿ ಅವಕಾಶ ಸಿಗದಿದ್ದಾಗ ನಮ್ಮ ಪಕ್ಷದಿಂದ ಸ್ಪರ್ಧೆ ಮಾಡಿಸಿದ್ದೇವೆ.ಯಾವುದೇ ಪಕ್ಷ ಇದಕ್ಕೆ ಹೊರತಾಗಿಲ್ಲ. ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ” ಎಂದು ತಿಳಿಸಿದರು.
ಸದಾನಂದ ಗೌಡರ ಸೇರ್ಪಡೆಗೆ ಅವಕಾಶ ಇದೆಯೇ ಎಂದು ಕೇಳಿದಾಗ, “ನಮ್ಮ ತಂತ್ರಗಾರಿಕೆಯನ್ನು ನಾವು ಬಿಟ್ಟು ಕೊಡುವುದಿಲ್ಲ” ಎಂದು ತಿಳಿಸಿದರು.
