ನಾನು ಕಾಂಗ್ರೆಸ್ ನಾಯಕರಿಗೆ ಪೆನ್ ಡ್ರೈವ್ ಕೊಟ್ಟಿಲ್ಲ; ಪ್ರಜ್ವಲ್ ಮಾಜಿ ಕಾರು ಚಾಲಕ.ಅವನ ಪ್ರಕಾರವೇ ಕಾಂಗ್ರೆಸ್ ನಾಯಕರಿಗೆ ಕೊಟ್ಟಿದ್ದಾನೆ; ದೇವರಾಜೇಗೌಡ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಈಗ ವಿಭಿನ್ನ ಹೇಳಿಕೆ ನೀಡುತ್ತಿರುವ ಮಾಜಿ ಕಾರು ಚಾಲಕ ಮತ್ತು ದೇವರಾಜೇಗೌಡ. ಹಾಗಿದ್ದರೆ ಇಬ್ಬರಲ್ಲಿ ಸುಳ್ಳು ಹೇಳುತ್ತಿರುವವರು ಯಾರು ?
ಪ್ರಜ್ವಲ್ ಕಾರು ಚಾಲಕ ಕಾರ್ತಿಕ್ ಇಂದು ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ನಾನು ಪೆನ್ ಡ್ರೈವ್ ಅನ್ನು ದೇವರಾಜೇ ಗೌಡರನ್ನು ಬಿಟ್ಟು ಬೇರೆಯವರಿಗೆ ನೀಡಿಲ್ಲ ಎಂದು ಅವರು ಹೇಳಿದ್ದಾರೆ.

ಈ ಎಲ್ಲ ವಿಚಾರಗಳನ್ನು ಎಸ್ ಐ ಟಿ ಮುಂದೆ ಹೇಳಿ ನಂತರ ಮಾಧ್ಯಮದ ಮುಂದೆ ಮಾತನಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ, ಅದೇ ರೀತಿ ದೇವರಾಜೇಗೌಡರು ಹೇಳಿಕೆ ನೀಡಿ ಕಾಂಗ್ರೆಸ್ ನಾಯಕರಿಗೆ ಪೆಣ್ ಡ್ರೈವ್ ನೀಡುರುದಾಗಿ ಕಾರ್ತಿಕ ಹೇಳಿದ್ದು ನಿಜ ಎಂದು ಸಮರ್ಥಿಸಿಕೊಂಡಿದ್ದಾರೆ. ಹಾಗಿದ್ದರೆ ಇಬ್ಬರಲ್ಲಿ ಯಾರ ಮಾತು ಸತ್ಯ ? ಯಾರ ಮಾತು
ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಜೆಡಿಎಸ್‌ನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣರ ಮಾಜಿ ಕಾರು ಚಾಲಕ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ದೇವರಾಜೇಗೌಡ ಅವರು ದೇವೇಗೌಡರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ ಎಂದಿರುವ ಮಾಜಿ ಕಾರ್ ಚಾಲಕ ಕಾರ್ತಿಕ್, ಯಾವುದೇ ಅಶ್ಲೀಲ ವಿಡಿಯೋ ರಿಲೀಸ್ ಮಾಡಬಾರದು ಎಂದು ನನ್ನ ವಿರುದ್ದ ಪ್ರಜ್ವಲ್‌ ರೇವಣ್ಣ ಸ್ಟೇ ತಂದಿದ್ದಾರೆ. ಆಗ ನಿನ್ನ ಬಳಿ ಇರುವ ವಿಡಿಯೋ, ಫೋಟೋಸ್ ನಾನು ಯಾರಿಗೂ ತೋರಿಸಲ್ಲ ಕೊಡು ಎಂದು ದೇವರಾಜೇಗೌಡ ಕೇಳಿದ್ರು. ನಾನು ನಂಬಿ ನನ್ನ ಬಳಿಯಿದ್ದ ವಿಡಿಯೋದ ಒಂದು ಕಾಪಿ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಗೊತ್ತಿಲ್ಲ. ದೇವರಾಜೇಗೌಡರನ್ನು ಬಿಟ್ಟರೆ ಬೇರೆ ಯಾರಿಗೂ ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನವರಿಗೆ ನಾನು ವಿಡಿಯೋ ಕೊಟ್ಟಿಲ್ಲ’ ಎಂದಿರುವ ಕಾರ್ತಿಕ್, ಕಾಂಗ್ರೆಸ್ ಅವರ ಮೇಲೆ ನಂಬಿಕೆ ಇಲ್ಲದೆ ದೇವರಾಜೇಗೌಡರ ಹತ್ತಿರ ಕೊಟ್ಟಿದ್ದೆ. ಪೆನ್‌ಡ್ರೈವ್ ಯಾರು ಹಂಚಿದರೋ ಗೊತ್ತಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಕಾಂಗ್ರೆಸ್ ಅವರಿಗೆ ಕೊಡುವುದಿದ್ದರೆ ದೇವರಾಜೇಗೌಡ ಬಳಿ ಏಕೆ ಹೋಗುತ್ತಿದ್ದೆ ಇವತ್ತು ಎಸ್‌ಐಟಿ ಮುಂದೆ ಹಾಜರಾಗಿ ಎಲ್ಲಾ ಹೇಳಿಕೊಳ್ಳುತ್ತೇನೆ. ನಂತರ ಮಾಧ್ಯಮದ ಮುಂದೆ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ ಎಂದಿದ್ದಾರೆ.

ರೇವಣ್ಣ ಮನೆಯಲ್ಲಿ ಏನೆಲ್ಲಾ ನಡೆದಿದೆ ನಾನು ನೋಡಿದ್ದೇನೆ. ಎಲ್ಲವನ್ನೂ ಎಸ್‌ಐಟಿ ಮುಂದೆ ಹೇಳುತ್ತೇನೆ. ಯಾರಿಗೆ ಅನ್ಯಾಯ ಆಗಿದೆಯೋ ಧೈರ್ಯವಾಗಿ ಮುಂದೆ ಬನ್ನಿ ಎಂದು ಕಾರ್ತಿಕ್ ವಿಡಿಯೊ ಮೂಲಕ ಮನವಿ ಮಾಡಿದ್ದಾರೆ.

.

Author

error: